ಮಡಿಕೇರಿ, ಸೆ. ೧೫: ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳೆಯರ ನೌಕರರ ಸಂಘದ ರಾಜ್ಯಮಟ್ಟದ ಸಮಾವೇಶದಲ್ಲಿ ವೀರಾಜಪೇಟೆ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿ. ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯುತ್ತಮ ಗ್ರಾಮೀಣ ಶಾಲೆ ಎಂದು ಆಯ್ಕೆ ಮಾಡಿ ಆದರ್ಶ ಶೈಕ್ಷಣಿಕ ಸಂಸ್ಥೆ ಎಂಬ ರಾಜಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಗೀತಾಂಜಲಿ ಮತ್ತು ಸಹಶಿಕ್ಷಕಿ ಮಳವಂಡ ಶೈಲಾ ಕಾವೇರಮ್ಮ ಪ್ರಶಸ್ತಿ ಸ್ವೀಕರಿಸಿದರು.