ಮಡಿಕೇರಿ, ಸೆ. ೧೪: ಮಡಿಕೇರಿಯ ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿಯ ಶಾಂತಿನಿಕೇತನ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ೪೬ನೇ ವರ್ಷದ ಗಣೇಶೋತ್ಸವದ ಅಂಗವಾಗಿ ತಾ. ೧೫ರಂದು (ಇಂದು) ಸಾರ್ವಜನಿಕರು ಹಾಗೂ ಮಕ್ಕಳಿಗೆ ವಿವಿಧ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ. ಶಾಂತಿನಿಕೇತನ ಆವರಣದಲ್ಲಿ ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟ ಆರಂಭವಾಗಲಿದೆ.
ಈ ಬಾರಿ ವಿಶೇಷ ಎಂಬAತೆ ಅಯೋಧ್ಯೆಯ ಶ್ರೀರಾಮಲಲ್ಲನ ಮಾದರಿಯ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಪ್ರತಿನಿತ್ಯ ವಿವಿಧ ಪೂಜಾದಿ ಕಾರ್ಯಗಳು ನಡೆಯುತ್ತಿದ್ದು, ತಾ. ೧೯ರಂದು ರಂಗಪೂಜೆ ಏರ್ಪಡಿಸಲಾಗಿದೆ ಎಂದು ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಚೇತನ್ ತಿಳಿಸಿದ್ದಾರೆ.