ನಾಪೋಕ್ಲು, ಸೆ. ೧೫: ಕೂವಲೆ ಪುಟ್ಟ್, ಮದ್ದ್ ಪುಟ್ಟ್, ಬಾಳೆನುರ್ಕ್, ಬಡವಕಜ್ಜಾಯ, ಕೇಂಬು ಕರಿ, ಕಾಡ್ ಮಾಂಗೆ ಕರಿ, ಕುರುಕರಿ, ಚಕ್ಕೆಕುರು ಪಜ್ಜಿ... ಒಂದೇ ಎರಡೇ ಹತ್ತು ಹಲವು ಕೊಡವ ಜನಾಂಗದ ತಿಂಡಿ ತಿನಿಸುಗಳು ನೆರೆದಿದ್ದವರ ಬಾಯಲ್ಲಿ ನೀರೂರಿಸಿದವು. ಕೈಲ್ ಪೊಳ್ದ್ ತೀನಿ ನಮ್ಮೆಯ ವೈವಿಧ್ಯಮಯ ಕಾರ್ಯಕ್ರಮಗಳಿಗೆ ನಾಪೋಕ್ಲು ಕೊಡವ ಸಮಾಜ ಸಾಕ್ಷಿಯಾಯಿತು.

ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಗುರುವಾರ ನಡೆದ ಕೈಲ್‌ಪೊಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡಿರ ಸರೋಜ ದೇವಯ್ಯ ಉದ್ಘಾಟಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ನಾಪೋಕ್ಲು ಕೆಪಿಎಸ್ ಶಾಲೆಯ ಪ್ರಾಂಶುಪಾಲ ಮೇದುರ ವಿಶಾಲ ಕುಶಾಲಪ್ಪ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕೊಡವ ಜನಾಂಗ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಆಗಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ. ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವ ಜನಾಂಗ ರೂಢಿಸಿಕೊಳ್ಳಬೇಕು. ಎಂದ ಅವರು ಸಮಾಜದ ಮಕ್ಕಳಿಗೆ ಪಾರಂಪರಿಕ ಸಂಪ್ರದಾಯಗಳನ್ನು ತಿಳಿಸುವ ಕೆಲಸ ಆಗಬೇಕಿದೆ. ಮಕ್ಕಳ ಪೋಷಣೆಯಲ್ಲಿ ತಾಯಂದಿರ ಪಾತ್ರ ಮಹತ್ವದ್ದು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಂಥದ್ದು ಪೋಷಕರ ಜವಾಬ್ದಾರಿ ಎಂದ ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳ ಬೇಕೆಂದು ಕೆಲವು ಸಲಹೆೆಗಳನ್ನು ನೀಡಿದರು.

ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಮಾತನಾಡಿ ಹಬ್ಬ, ಹರಿದಿನ, ಆಚಾರ, ವಿಚಾರಗಳಲ್ಲಿ ಕೊಡವ ಭಾಷೆಯ ಬಳಕೆ ಹೆಚ್ಚು ಹೆಚ್ಚು ಆಗಬೇಕು. ಭಾಷೆ ಉಳಿಸುವ ಜವಾಬ್ದಾರಿ ತಾಯಂದಿರ ಮೇಲಿದೆ ಎಂದರು.

ಕೊಡವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಕೊಡವ ಮಹಿಳೆಯರ ಪಾತ್ರ ವಿಷಯದ ಕುರಿತು ಕದ್ದಣಿಯಂಡ ವಂದನಾ ಚಿಣ್ಣಪ್ಪ ವಿಚಾರ ಮಂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆÉಯಡ ನಿಶಾ ಮೇದಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬಲ್ಲಮಾವಟಿ ಗ್ರಾಮದ ಲೇಖಕಿ ಅಪ್ಪಚೆಟ್ಟೋಳಂಡ ವನು ವಸಂತ, ಮಡಿಕೇರಿಯ ಕೆಎಸ್‌ಒಯು ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಅವರುಗಳ ಸಾಧನೆಗಳನ್ನು ಸನ್ಮಾನಿಸಲಾಯಿತು.

ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಕೊಡವ ಸಮಾಜದ ಮತ್ತು ಮೊಮ್ಮಕ್ಕಡ ಪರಿಷತ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಮೊÀÄ್ಮಕ್ಕಡ ಪರಿಷತ್ ನಿರ್ದೇಶಕಿ ಮಮತಾ ಪ್ರಾರ್ಥಸಿ, ಬಾಳೆಯಡ ದಿವ್ಯ ಮಂದಪ್ಪ ನಿರೂಪಿಸಿ, ಕಲಿಯಂಡ ಗೀತಾ ವಂದಿಸಿದರು.

ಬಾಯಲ್ಲಿ ನೀರೂರಿಸುವ ಮಳೆಗಾಲದ ಖಾದ್ಯಗಳಾದ ಸಾರು, ಸಾಂಬಾರು, ಚಟ್ನಿ, ಪಲ್ಯ ಸೇರಿದಂತೆ ನೂರಾರು ತಿನಿಸು ಹಾಗೂ ವಿವಿಧ ಕ್ರೀಡಾಕೂಟ ಸ್ಪರ್ಧೆ ಆಯೋಜಿಸಿದ ಬಳಿಕ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.