ನಾಪೋಕ್ಲು, ಸೆ. ೧೬: ಕೊಡಗು ಜಿಲ್ಲೆಯ ಬ್ರಹ್ಮಗಿರಿ ಸಹೋದಯದ ಕ್ಲಸ್ಟರ್ ವತಿಯಿಂದ ಅಂಕುರ್ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ಇಲ್ಲಿನ ಕೊಡವ ಸಮಾಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಪಾಲಿಬೆಟ್ಟ ಚೆಶೈರ್ ಹೋಂ ಅಧ್ಯಕ್ಷೆ ಗೀತ ಚಂಗಪ್ಪ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೇಟೋಳಿರ ರಾಜ ಚರ್ಮಣ ವಹಿಸಿದ್ದರು. ವೇದಿಕೆಯಲ್ಲಿ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಹಾಗೂ ಬ್ರಹ್ಮಗಿರಿ ಸಹೋದಯದ ಖಜಾಂಜಿ ರತ್ನ ಚರ್ಮಣ, ಅರಮೇರಿ ಎಸ್‌ಎಂಎಸ್ ಶಾಲೆಯ ಪ್ರಾಂಶುಪಾಲರಾದ ಕುಸುಮ್ ಟಿಟೋ, ಮಡಿಕೇರಿ ಎ.ಎಲ್.ಜಿ ಶಾಲೆಯ ಪ್ರಾಂಶುಪಾಲರಾದ ಜಾಯ್ಸಿ, ಮಡಿಕೇರಿ ಕೊಡಗು ವಿದ್ಯಾಲಯ ಶಾಲೆಯ ಪ್ರಾಂಶುಪಾಲೆ ಸುಮಿತ್ರ, ಪಾಲಿಬೆಟ್ಟ ಜ್ಞಾನಗಂಗಾ ಶಾಲೆಯ ಪ್ರಾಂಶುಪಾಲೆ ಸುಲೋಚನ, ಗೋಣಿಕೊಪ್ಪ ನ್ಯಾಷನಲ್ ಅಕಾಡೆಮಿ ಶಾಲೆಯ ಪ್ರಾಂಶುಪಾಲೆ ಪುಷ್ಪ, ಅಂಕುರ್ ಪಬ್ಲಿಕ್ ಶಾಲೆಯ ನಿರ್ದೇಶಕಿ ಗೌರಮ್ಮ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.