ಸೋಮವಾರಪೇಟೆ,ಸೆ. ೧೬ : ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದಿಗೂ ಜಟಿಲವಾಗಿರುವ ತ್ಯಾಜ್ಯ ಸಮಸ್ಯೆಗೆ ಮುಕ್ತಿ ನೀಡುವುದರೊಂದಿಗೆ, ಕಚೇರಿಯಲ್ಲಿನ ಸಿಬ್ಬಂದಿಗಳ ಕೊರತೆಯನ್ನು ನೀಗಿಸಿ, ಸ್ವಚ್ಛ ಆಡಳಿತಕ್ಕೆ ಕ್ರಮ ಕೈಗೊಳ್ಳುವುದಾಗಿ ಸೋಮವಾರಪೇಟೆ ಪ.ಪಂ. ನೂತನ ಅಧ್ಯಕ್ಷೆ ಜಯಂತಿ ಶಿವಕುಮಾರ್ ಇಂಗಿತ ವ್ಯಕ್ತಪಡಿಸಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ‘ಶಕ್ತಿ’ಯೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಇನ್ನಷ್ಟು ವಿಸ್ತರಿಸಿ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಮೂಲಕ ಪಂಚಾಯಿತಿಯ ಅಭಿವೃದ್ದಿಗೆ ತನ್ನ ಅವಧಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಒಂದು ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯೆಯಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಹಿರಿಯ ಸದಸ್ಯೆ ಜಯಂತಿ ಅವರು, ಈ ಸಾಲಿನ ಎರಡನೇ ಅವಧಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತಿರುವುದು ಇದೇ ಮೊದಲಾದರೂ, ಸದಸ್ಯೆಯಾಗಿ ೯ ವರ್ಷಗಳ ಅನುಭವ ಹೊಂದಿದ್ದಾರೆ.

ಈಗಾಗಲೇ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳ ಸಭೆ ನಡೆಸಿ, ಅವರುಗಳ ಕುಂದು ಕೊರತೆಗಳನ್ನು ಆಲಿಸಲಾಗಿದೆ. ಸಿಬ್ಬಂದಿಗಳ ಕೊರತೆಯ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಹೊಸ ಬಡಾವಣೆಯಲ್ಲಿ ಪೌರ ಕಾರ್ಮಿಕರಿಗೆ ನಿವೇಶನ ನೀಡುವ ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದೆ. ನಾಲ್ಕೆöÊದು ಮಂದಿಗೆ ಸಮರ್ಪಕ ದಾಖಲೆಗಳ ಕೊರತೆಯಿದೆ ಎಂಬ ಮಾಹಿತಿ ಬಂದಿದೆ. ಉಳಿದಿರುವ ಪೌರಕಾರ್ಮಿಕರಿಗೆ ತಕ್ಷಣ ನಿವೇಶನ ಕಲ್ಪಿಸಲು ಮುಂದಿನ ಸಭೆಯಲ್ಲಿ ಕ್ರಮ ವಹಿಸುವುದಾಗಿ ಜಯಂತಿ ಅವರು ‘ಶಕ್ತಿ’ಯೊಂದಿಗೆ ತಿಳಿಸಿದ್ದಾರೆ.

ಪಟ್ಟಣದಲ್ಲಿ ದಿನದಿಂದ ದಿನಕ್ಕೆ ತ್ಯಾಜ್ಯದ ಉತ್ಪಾದನೆ ಹೆಚ್ಚುತ್ತಿದ್ದು, ವಿಲೇವಾರಿ ಕಗ್ಗಂಟಾಗುತ್ತಿರುವ ಬಗ್ಗೆ ಗಮನ ಸೆಳೆದ ಸಂದರ್ಭ, ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಪೂರ್ಣಗೊಳಿಸಿ, ಸಮಸ್ಯೆಗೆ ಮುಕ್ತಿ ನೀಡಲಾಗುವುದು. ಸದ್ಯದಲ್ಲಿಯೇ ಆಡಳಿತ ಮಂಡಳಿ ಸದಸ್ಯರುಗಳೊಂದಿಗೆ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಕಾಮಗಾರಿಗೆ ಚುರುಕು ನೀಡಿ ಹಲವು ದಶಕಗಳ ಸಮಸ್ಯೆಯಾಗಿರುವ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಷ್ಟು ಕಾಮಗಾರಿಗಳು ಟೆಂಡರ್ ಆಗಿದ್ದರೂ ಕಾಮಗಾರಿ ಪ್ರಾರಂಭಗೊಳ್ಳದ ಬಗ್ಗೆ ಗಮನ ಸೆಳೆದ ಸಂದರ್ಭ, ನಗರೋತ್ಥಾನ ಸೇರಿದಂತೆ ಇನ್ನಿತರ ಯೋಜನೆಗಳಡಿ ಟೆಂಡರ್ ಆಗಿದ್ದರೂ ಕೆಲಸ ಪ್ರಾರಂಭಗೊAಡಿಲ್ಲ. ಕೆಲವೆಡೆ ಕಾಮಗಾರಿ ಪ್ರಾರಂಭಗೊAಡಿದ್ದರೂ, ಈವರೆಗೆ ಪೂರ್ಣಗೊಂಡಿಲ್ಲ. ಈ ಬಗ್ಗೆ ಇಂಜಿನಿಯರ್ ವಿಭಾಗದಿಂದ ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಾಗುವುದು.

(ಮೊದಲ ಪುಟದಿಂದ) ಕೆಲಸ ಆರಂಭಿಸದ ಗುತ್ತಿಗೆದಾರರಿಗೆ ನೋಟೀಸ್ ನೀಡಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಮಹತ್ವಾಕಾAಕ್ಷೆಯ ಅಮೃತ್ ಯೋಜನೆ ಕಾಮಗಾರಿ ಕೆಲ ದಿನಗಳಲ್ಲಿಯೇ ಪಟ್ಟಣದಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆ ಈಗಾಗಲೇ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಪಂಚಾಯಿತಿ ನಿಯೋಗ ಭೇಟಿ ನೀಡಿ ಪರಿಶೀಲಿಸಲಾಗುವುದು. ಯೋಜನೆಯಂತೆ ಕೆಲಸ ನಿರ್ವಹಿಸಲು ಸಂಬAಧಿಸಿದ ಗುತ್ತಿಗೆದಾರರಿಗೆ ಸೂಚಿಸಲಾಗುವುದು. ಈ ಯೋಜನೆ ಸಂಪೂರ್ಣ ಅನುಷ್ಠಾನಗೊಂಡರೆ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಂಚಾಯಿತಿಯಲ್ಲಿ ಖಾಯಂ ಕಂದಾಯ ನಿರೀಕ್ಷಕ ಮತ್ತು ಅಭಿಯಂತರರು ಇಲ್ಲದಿರುವುದರಿಂದ ಕೆಲಸ ಕಾರ್ಯಗಳಿಗೆ ಹಿನ್ನೆಡೆಯಾಗಿದೆ. ಈ ಹಿನ್ನೆಲೆ ಎಲ್ಲಾ ಸದಸ್ಯರನ್ನು ಒಳಗೊಂಡAತೆ ನಿಯೋಗ ಜಿಲ್ಲಾಧಿಕಾರಿಗಳ ಬಳಿಗೆ ತೆರಳಿ, ಸಿಬ್ಬಂದಿಗಳ ಭರ್ತಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದು. ಸ್ವಚ್ಛ ಪಟ್ಟಣಕ್ಕೆ ಆದ್ಯತೆ ನೀಡಬೇಕಿದ್ದು, ಹೆಚ್ಚಿನ ಕೆಲಸ ಇದ್ದ ಸಂದರ್ಭ ಹೊರಗುತ್ತಿಗೆಯಲ್ಲಿ ಹೆಚ್ಚುವರಿ ಪೌರ ಕಾರ್ಮಿಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಕಂದಾಯ ವಸೂಲಾತಿಗೆ ಇಲಾಖೆಯಿಂದಲೇ ಟಾರ್ಗೆಟ್ ನೀಡಲಾಗಿದೆ. ಸಿಬ್ಬಂದಿಗಳು ಈ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದ ಅವರು, ಬೀದಿ ದೀಪಗಳ ಅಳವಡಿಕೆ, ಪಟ್ಟಣದ ಸ್ವಚ್ಛತೆಯೊಂದಿಗೆ ಮೂಲಭೂತ ಸೌಕರ್ಯಗಳನ್ನು ಇನ್ನಷ್ಟು ವಿಸ್ತರಿಸಲು ಚಿಂತನೆ ಹರಿಸಲಾಗಿದೆ ಎಂದರು.

ಪ.ಪA. ವತಿಯಿಂದ ನಿರ್ಮಿಸಿರುವ ಹಲವಷ್ಟು ಅಂಗಡಿ ಮಳಿಗೆಗಳು ಇಂದಿಗೂ ಖಾಲಿ ಬಿದ್ದಿದ್ದು, ಪಂಚಾಯಿತಿಗೆ ನಷ್ಟವಾಗುತ್ತಿರುವ ಬಗ್ಗೆ ಗಮನ ಸೆಳೆದ ಹಿನ್ನೆಲೆ, ಖಾಲಿ ಇರುವ ಮಳಿಗೆಗಳನ್ನು ಟೆಂಡರ್ ಕರೆಯಲು ಕ್ರಮ ವಹಿಸಲಾಗುವುದು. ಕೆಲವೊಂದು ವಾಣಿಜ್ಯ ಸಂಕೀರ್ಣಗಳನ್ನು ನವೀಕರಣ ಮಾಡಬೇಕಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಸದಸ್ಯರುಗಳೊಂದಿಗೆ ಆಯಾ ವಾರ್ಡ್ಗಳಿಗೆ ಭೇಟಿ ನೀಡಿ, ಖುದ್ದು ಸಮಸ್ಯೆಗಳನ್ನು ಆಲಿಸಲಾಗುವುದು. ಭ್ರಷ್ಟಾಚಾರಕ್ಕೆ ಅವಕಾಶ ನೀಡದೇ, ಪಂಚಾಯಿತಿಯ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು. ಈ ನಿಟ್ಟಿನಲ್ಲಿ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗಳು, ಸದಸ್ಯರುಗಳು, ಶಾಸಕರು, ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆಯಲಾಗುವುದು ಎಂದು ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಭಿಪ್ರಾಯಿಸಿದರು. - ವಿಜಯ್ ಹಾನಗಲ್