*ಗೋಣಿಕೊಪ್ಪ, ಸೆ. ೧೬: ರೂ. ೨ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಗೋಣಿಕೊಪ್ಪ ಪ್ರಯಾಣಿಕರ ತಂಗುದಾಣ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಪರಿಶೀಲಿಸಿದರು.

ಇಲ್ಲಿನ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು ಈಗಾಗಲೇ ಕಾಮಗಾರಿ ಶೇ. ೫೦ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಇದೇ ಸಂದರ್ಭ ದಸರಾ ಮೈದಾನಕ್ಕೆ ತೆರಳುವ ಮಾರ್ಗವನ್ನು ಕಾಂಕ್ರೀಟೀಕರಣಗೊಳಿಸಿರುವ ಕಾಮಗಾರಿಯನ್ನು ವೀಕ್ಷಿಸಿದರು. ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಸದಸ್ಯರುಗಳಾದ ಚೆಪುö್ಪಡೀರ ದ್ಯಾನ್ ಸುಬ್ಬಯ್ಯ, ಶರತ್ ಕಾಂತ್, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ನಾಯಂದರ ಆರ್. ಶಿವಾಜಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಸೇರಿದಂತೆ ಕಾರ್ಯಕರ್ತರು ಇದ್ದರು.