ಶನಿವಾರಸಂತೆ, ಸೆ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಪ್ರಜಾ ಪ್ರಭುತ್ವದ ಆಶಯಗಳನ್ನು ಗ್ರಾಮ ಮಟ್ಟದಲ್ಲಿ ಸಾಕಾರಗೊಳಿಸುವಂತಹ ಕೆಲಸವನ್ನು ಬಹಳ ಶಿಸ್ತುಬದ್ಧವಾಗಿ ಮಾಡುತ್ತಿದ್ದು, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಸಮಾನತೆ ಮತ್ತು ಸಹಬಾಳ್ವೆಗೆ ಮಾದರಿಯಾಗಿದೆ ಎಂದು ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಅಭಿಪ್ರಾಯಪಟ್ಟರು.
ಸಮೀಪದ ಕೊಡ್ಲಿಪೇಟೆಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡ್ಲಿಪೇಟೆ ವಲಯ, ಕ್ರೀಡಾಕೂಟ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟ ಹಾಗೂ ಸನ್ಮಾನ ಸಮಾರಂಭದಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ಬಲೂನ್ ಪಾಸಿಂಗ್, ಮಡಿಕೆ ಒಡೆಯುವ ಸ್ಪರ್ಧೆ, ಚಕ್ಕುಲಿ ಕಚ್ಚಿ ಓಡುವ ಸ್ಪರ್ಧೆಗಳನ್ನು ನಡೆಸಲಾಯಿತು.
ನಂತರ ನಡೆದ ಸನ್ಮಾನ ಹಾಗೂ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಮ್ಮಿಕೊಂಡಿರುವ ಕಾರ್ಯ ಮನುಷ್ಯ ಜೀವನದ ಎಲ್ಲಾ ಸಂದರ್ಭಗಳಲ್ಲೂ ಅವನಿಗೆ ಸಹಕಾರಿಯಾಗುತ್ತಿದೆ. ಕಾರ್ಯಕ್ರಮದಲ್ಲಿ ಸಿಗುವ ಸೌಲಭ್ಯ ಮತ್ತು ಶಿಸ್ತನ್ನು ಅಳವಡಿಸಿಕೊಂಡು ಸಮಾಜದಲ್ಲಿ ಮುಂದೆ ಬರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಕೊಡ್ಲಿಪೇಟೆಯ ನಿವಾಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಹಾಗೂ ಸಮಾಜಸೇವಕ ಬೀಟಿಕಟ್ಟೆಯ ಫ್ರಾನ್ಸಿಸ್ ಡಿಸೋಜ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ, ಫಲಾನುಭವಿಗಳಿಗೆ ಮಾಸಾಶನ, ಆರೋಗ್ಯ ರಕ್ಷಾ ಹಾಗೂ ಮೈಕ್ರೋ ಬಜೆಟ್ ಕ್ಲೆöÊಮ್ ಇತ್ಯಾದಿ ಸೌಲಭ್ಯಗಳನ್ನು ವಿತರಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರೋಹಿತ್, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಕೆ.ಪಿ. ನಾಗರಾಜ್, ಶಾಂತಳ್ಳಿ ವಲಯ ಮೇಲ್ವಿಚಾರಕ ಲಕ್ಷö್ಮಣ್, ಕಚೇರಿ ಸಹಾಯಕ ಪ್ರಬಂಧಕ ಜಿತೇಂದ್ರ, ನಗದು ಮೇಲ್ವಿಚಾರಕ ರಾಘವೇಂದ್ರ, ವಲಯದ ಎಲ್ಲಾ ಸೇವಾಪ್ರತಿನಿಧಿ ಗಳು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಭಗವಾನ್, ಸಹಕಾರ ಸಂಘದ ನಿರ್ದೇಶಕ ಬಿ.ಕೆ, ಯತೀಶ್, ಮಾಜಿ ಸೈನಿಕ ಮನು, ಒಕ್ಕಲಿಗರ ಯುವ ವೇದಿಕೆ ಹೋಬಳಿ ಅಧ್ಯಕ್ಷ ವಸಂತ್, ಗಂಗಾ ವೀರಶೈವ ಮಹಿಳಾ ಸಮಾಜದ ಅಧ್ಯಕ್ಷೆ ಮಂಜುಳಾ, ಶಿಲ್ಪಿ ವರಪ್ರಸಾದ್, ಶನಿವಾರಸಂತೆ ಮದ್ಯವರ್ಜನಾ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ದಿವಾಕರ್, ಕ್ರೀಡಾ ಸಮಿತಿ ಅಧ್ಯಕ್ಷೆ ಪಂಕಜಾ, ಕೊಡ್ಲಿಪೇಟೆ ವಲಯದ ಎಲ್ಲಾ ಸೇವಾಪ್ರತಿನಿಧಿಗಳು, ಶನಿವಾರಸಂತೆ ವಲಯದ ಸೇವಾಪ್ರತಿನಿಧಿ ಶೋಭಾ, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.