ಮಡಿಕೇರಿ, ಸೆ. ೧೮: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ಸಂಸ್ಥೆ ಮತ್ತು ಸ್ಪಂದನಾ ಮಹಿಳಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಗೌಳಿಬೀದಿಯ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನದ ಪ್ರಯುಕ್ತ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಯಿತು.
ಮಹಿಳೆಯರಿಗೆ ಪೌಷ್ಟಿಕ ಆಹಾರವನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತ ಮಹಿಳೆಯರಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರೋತ್ಸಾಹಕ ಬಹುಮಾನವನ್ನು ರೋಟರಿ ವುಡ್ಸ್ ಸಂಸ್ಥೆಯ ವತಿಯಿಂದ ನೀಡಲಾಯಿತು.
ಸಭೆಯಲ್ಲಿ ಮಡಿಕೇರಿ ರೋಟರಿ ವುಡ್ಸ್ ಸಂಸ್ಥೆಯ ಅಧ್ಯಕ್ಷ ವಸಂತ ಕುಮಾರ್, ಕಾರ್ಯದರ್ಶಿ ಕಿರಣ್ ಕುಂದರ್, ಪದಾಧಿಕಾರಿಗಳಾದ ಕಶ್ಯಪ್, ಪ್ರಮೀಳಾ ಶೆಟ್ಟಿ, ರವಿಕುಮಾರ್ ಹಾಗೂ ಸ್ಪಂದನಾ ಮಹಿಳಾ ಸಂಘದ ಅಧ್ಯಕ್ಷೆ ಕಟ್ರತನ ಲಲಿತಾ ಅಯ್ಯಣ್ಣ, ಹಸೀನಾ, ವಿಜಯಲಕ್ಷಿö್ಮ, ಅಂಗನವಾಡಿ ಕಾರ್ಯಕರ್ತೆ ಗೀತಾ ಉಪಸ್ಥಿತರಿದ್ದರು.