ಮಡಿಕೇರಿ, ಸೆ. ೧೮: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ಹೊಸ ಬಡಾವಣೆಯ ನಿವಾಸಿ ನವೀನ್ ಪೂಜಾರಿ ಎಂಬವರ ಪತ್ನಿ ರೋಜಾ (೨೭) ಎಂಬವರೆ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಮನೆಯ ಮಲಗುವ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೃತರು ಪತಿ ಹಾಗೂ ಮಗುವನ್ನು ಅಗಲಿದ್ದಾರೆ. ತಲೆನೋವಿನಿಂದ ಮನನೊಂದು ರೋಜಾ ಅವರು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.