ಕೂಡಿಗೆ, ಸೆ. ೧೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಕಾಂಚನ ದೇವಾನಂದ್ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಮಾತನಾಡಿ, ಹುದುಗೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಿAದ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸುವ ಕಾರ್ಯ ಮುಗಿದಿರುವುದರಿಂದ ಜಾಗದ ದಾಖಲೆಗಳನ್ನು ಒದಗಿಸಿದರೆ ಹಾಸನ ಹಾಲು ಒಕ್ಕೂಟದ ವತಿಯಿಂದ ಹುದುಗೂರು ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ೭ ಲಕ್ಷ ರೂ.ಗಳನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು ಎಂದರು.

ಹಾಸನ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಬಿ.ವಿ. ವೀಣಾ ಒಕ್ಕೂಟದ ವತಿಯಿಂದ ಗುಣಮಟ್ಟದ ಪಶು ಅಹಾರ ಮತ್ತು ಪಶು ರೋಗಗಳಿಗೆ ಪಶು ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕೆ ರಶ್ಮಿ, ನಿರ್ದೇಶಕರುಗಳಾದ ಜಮುನ, ಪುಟ್ಟಮ್ಮ, ರತ್ನ, ಲತಾ, ಪದ್ಮ, ಸುಮರ, ಪುಷ್ಪವತಿ ಇದ್ದರು. ಸಂಘದ ಕಾರ್ಯದರ್ಶಿ ಜಾನಕಿ ಸ್ವಾಗತಿಸಿ, ವಂದಿಸಿದರು.