ಮುಳ್ಳೂರು, ಸೆ. ೧೮: ಜಾನಪದ ದಿನಾಚರಣೆ ಪ್ರಯುಕ್ತ ಕೊಡಗು ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ತಾ. ೧೯ರಂದು (ಇಂದು) ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ ಅಂತರ್ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ಗೀತ ಗಾಯನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಾನಪದ ಪರಿಷತ್ ಖಜಾಂಜಿ ಸಂಪತ್ಕುಮಾರ್ ಉದ್ಘಾಟಿಸಲಿದ್ದು ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಘಟಕದ ಅಧ್ಯಕ್ಷೆ ಡಿ. ಸುಜಲಾದೇವಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೊಡಗು ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮುನೀರ್ ಆಹಮ್ಮದ್, ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೃಷ್ಣರಾಜು, ವಿದ್ಯಾಸಂಸ್ಥೆಯ ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.