ಕೂಡಿಗೆ, ಸೆ. ೧೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ತೆರಳುವ ರಸ್ತೆಯು ತೀರ ಹಾಳಾಗಿದ್ದ ಹಿನ್ನೆಲೆಯಲ್ಲಿ ಕುಶಾಲನಗರ ಪುರಸಭೆಯ ೧೫ನೇ ಹಣಕಾಸು ಯೋಜನೆಯಡಿ ರೂ. ೨೫ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ. ಮಂತರ್‌ಗೌಡ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿ, ಭುವನಗಿರಿ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಯನ್ನು ಆರಂಭ ಮಾಡಲಾಗಿದೆ. ಇದರ ಜೊತೆಯಲ್ಲಿ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಿಂದ ಸಾರ್ವಜನಿಕರಿಗೆ, ಸ್ಥಳೀಯ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ಸಂಬAಧಿಸಿದ ಇಲಾಖೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಮುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆಯ ಸದಸ್ಯರುಗಳಾದ ಸುರೇಶ್, ಕಲಿಂಮುಲ್ಲಾ, ಸುರೇಯಾ ಭಾನು, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ, ಟಿ.ಪಿ. ಹಮೀದ್, ಚಂದ್ರು, ಸಹಕಾರ ಸಂಘದ ನಿರ್ದೇಶಕ ರಮೇಶ್, ಪುರಸಭೆಯ ಇಂಜಿನಿಯರ್ ರಂಗರಾಮ್, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಗ್ರಾಮದ ಪ್ರಮುಖರು ಹಾಜರಿದ್ದರು.