ಮಡಿಕೇರಿ, ಸೆ. ೧೮: ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೂರ್ನಾಡು ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಶಾಸ್ತಿçನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಬಾಲ್ಯದ ಆರೈಕೆ ಮತ್ತು ಶಿಕ್ಷಣದ ಕುರಿತು ಮಾಹಿತಿ ನೀಡಿದರು. ತೂಕದ ಮಹತ್ವ, ಸ್ತನ್ಯಪಾನದ ಮಹತ್ವ, ಸಮತೋಲನ ಆಹಾರ ಬಳಕೆ ಬಗ್ಗೆ, ಮಾತೃವಂದನ, ಭಾಗ್ಯಲಕ್ಷಿö್ಮ ಯೋಜನೆ ಬಗ್ಗೆ ವಿವರವಾಗಿ ತಿಳಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಮೂರ್ನಾಡಿನ ಹಿರಿಯ ಆರೋಗ್ಯ ಸಹಾಯಕಿ ಹೇಮಲತಾ ಆರೋಗ್ಯ ಇಲಾಖೆಯ ಸೌಲಭ್ಯದ ಬಗ್ಗೆ, ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು. ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ ಇಲಾಖೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಿರಿಯ ಆರೋಗ್ಯ ಸಹಾಯಕಿಯರಾದ ರೀಟಾ, ಲಲಿತಾ, ಆಶಾಕಾರ್ಯಕರ್ತೆ ಮಂಜುಳಾ ಪಾಲ್ಗೊಂಡಿದ್ದರು. ಪ್ರಾರ್ಥನೆಯನ್ನು ಅಂಗನವಾಡಿ ಕೇಂದ್ರದ ಮಕ್ಕಳು ಪ್ರಾರ್ಥಿಸಿ, ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಚೈತ್ರ ಸ್ವಾಗತಿಸಿ, ಶಾಸ್ತಿçನಗರ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ನಿರೂಪಿಸಿದರು.