ಮಡಿಕೇರಿ, ಸೆ. ೧೮: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೪೬ನೇ ವರ್ಷದ ಗಣೇಶೋತ್ಸವ ಅಂಗವಾಗಿ ಮಕ್ಕಳು ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಶಾಂತಿನಿಕೇತನ ಆವರಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಸ್ಥಳೀಯರು ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಕ್ರೀಡಾಪಟುಗಳಲ್ಲಿ ಕ್ರೀಡಾ ಸಂಭ್ರಮದಲ್ಲಿ ಭಾಗಿಯಾದರು. ಮಧ್ಯಾಹ್ನ ಎಲ್ಲರಿಗೂ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾ ಯಿತು. ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಚೇತನ್ ಮುಂದಾಳತ್ವದಲ್ಲಿ ಸಂಘದ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾ ಯಿತು. ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಚೇತನ್ ಮುಂದಾಳತ್ವದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಕ್ರೀಡಾಕೂಟ ನಡೆಸಿಕೊಟ್ಟರು.

ಇಂದು ರಂಗಪೂಜೆ : ಗಣೇಶೋತ್ಸವ ಪ್ರಯುಕ್ತ ತಾ. ೧೯ರಂದು (ಇಂದು) ಸಂಜೆ ರಂಗಪೂಜೆಯನ್ನು ಏರ್ಪಡಿಸಲಾಗಿದೆ.