ವೀರಾಜಪೇಟೆ, ಸೆ. ೧೮: ವೀರಾಜಪೆಟೆಯ ಮೂರ್ನಾಡು ರಸ್ತೆಯಲ್ಲಿನ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ೩೪ ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ನಾಟ್ಯಾಂಜಲಿ ನೃತ್ಯ ಶಾಲೆಯ ಸಂಸ್ಥಾಪಕಿ ಹೇಮಾವತಿ ಕಾಂತರಾಜ್, ಕಾವೇರಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಆನಂದ್ ರಾಜಪ್ಪ, ಕಾರ್ಯದರ್ಶಿ ವಿ.ಜೆ. ರಾಕೇಶ್ ಸೇರಿದಂತೆ ಹಲವಾರು ಮಂದಿ ಪ್ರೇಕ್ಷಕರು ಹಾಜರಿದ್ದರು.