ಮಡಿಕೇರಿ, ಸೆ.೧೯ : ಪ್ರಸಕ್ತ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯನ್ನು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ.
ಮಡಿಕೇರಿ ತಾಲೂಕಿನವರಿಗೆ ತಾ. ೨೦ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ ಆಯ್ಕೆಯನ್ನು ತಾ. ೨೧ ರಂದು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ. ಕ್ರೀಡಾಕೂಟ ನಡೆಯಲಿದೆ. ಕುಶಾಲನಗರ ತಾಲೂಕಿನವರಿಗೆ ತಾ. ೨೧ ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಮಡಿಕೇರಿ ಮತ್ತು ಕುಶಾಲನಗರ ಹಾಕಿ ಕ್ರೀಡಾಪಟುಗಳಿಗೆ ಹಾಕಿ ಆಯ್ಕೆ ಪ್ರಕ್ರಿಯೆಯು ಕೂಡಿಗೆ ಕ್ರೀಡಾಶಾಲೆ ಮೈದಾನದಲ್ಲಿ ನಡೆಯಲಿದೆ. ಸೋಮವಾರಪೇಟೆ ತಾಲೂಕಿನವರಿಗೆ ತಾ. ೨೨ ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಸೋಮವಾರಪೇಟೆಯ ಹಾಕಿ ಕ್ರೀಡಾಪಟುಗಳಿಗೆ ಹಾಕಿ ಆಯ್ಕೆ ಪ್ರಕ್ರಿಯೆ ಕ್ರೀಡಾ ಶಾಲೆ ಮೈದಾನ, ಕೂಡಿಗೆಯಲ್ಲಿ ಕ್ರೀಡಾಕೂಟ ನಡೆಯಲಿದೆ.
ಪೊನ್ನಂಪೇಟೆ ತಾಲೂಕಿನವರಿಗೆ ತಾ. ೨೩ ರಂದು ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನ ಪೊನ್ನಂಪೇಟೆ ಹಾಕಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವೀರಾಜಪೇಟೆ ತಾಲೂಕಿನವರಿಗೆ ತಾ. ೨೪ ರಂದು ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನ ಪೊನ್ನಂಪೇಟೆ ಹಾಕಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ತಾ. ೨೭ ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ನಡೆಯಲಿದೆ. ಟೇಬಲ್ ಟೆನ್ನಿಸ್ ಮತ್ತು ಷಟಲ್ ಬ್ಯಾಡ್ಮಿಂಟನ್ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ಮಡಿಕೇರಿ ತಾಲೂಕು ಮಹಾಬಲ ೯೯೮೦೮೮೭೪೯೯, ಮನು ೯೪೮೦೦೩೨೭೧೨, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವೆಂಕಟೇಶ್ ೯೮೪೪೩೨೬೦೦೭ ಹಾಗೂ ಮಂಜುನಾಥ್ ೯೩೪೨೫೬೩೦೧೪, ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು ಸುಬ್ಬಯ್ಯ ೮೧೯೭೭೯೦೩೫೦ ಹಾಗೂ ಗಣಪತಿ ೮೯೫೧೨೮೭೩೦೧ ನ್ನು ಸಂಪರ್ಕಿಸಬಹುದು.
ಆಯಾಯ ತಾಲೂಕಿನ ಕ್ರೀಡಾಪಟುಗಳು ತಮ್ಮ ತಾಲ್ಲೂಕಿನ ಕ್ರೀಡಾ ಕೂಟದಲ್ಲಿ ಮಾತ್ರ ಭಾಗವಹಿಸಬೇಕು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತ್ತೊಂದು ತಾಲೂಕಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹಾಗೆ ಕಂಡು ಬಂದಲ್ಲಿ ಅಂತಹ ತಂಡವನ್ನು ಅನರ್ಹಗೊಳಿಸಲಾಗುವುದು. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆಯಾಯ ದಿನದಂದು ಬೆಳಿಗ್ಗೆ ೯.೩೦ ರ ಒಳಗೆ ಕಡ್ಡಾಯವಾಗಿ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ.