ವೀರಾಜಪೇಟೆ, ಸೆ. ೧೯: ವೀರಾಜಪೇಟೆ ಕೊಡವ ಸಮಾಜದ ವತಿಯಿಂದ ಕೈಲ್‌ಪೊಳ್ದ್ ಅಂಗವಾಗಿ ತಾ. ೨೨ ರಂದು ಕೊಡವ ಜನಾಂಗದವರಿಗೆ ತೆಂಗಿನಕಾಯಿಗೆ ಗುಂಡುಹೊಡೆಯುವುದು ಸೇರಿದಂತೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬೆಳಿಗ್ಗೆ ೧೦ ರಿಂದ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.