ಮೈಸೂರು ದಸರಾ ಉದ್ಘಾಟನೆಗೆ ಹಂ.ಪ. ನಾಗರಾಜಯ್ಯ

ಬೆಂಗಳೂರು, ಸೆ. ೨೦: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿದ್ದೇನೆ. ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು. ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ ೩ ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ. ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ, ‘ಹಂಪನಾ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿದ್ದಾರೆ. ಹಂಪ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸAದ್ರದವರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿದರು. ಸೆಂಟ್ರಲ್ ಕಾಲೇಜಿಗೆ ಸೇರಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ ಎಂದು ತಿಳಿಸಿದರು.

ತಿರುಪತಿ ಲಡ್ಡು ವಿವಾದ: ನಂದಿನಿ ತುಪ್ಪ ಬಳಸುವಂತೆ ಸೂಚನೆ

ಬೆಂಗಳೂರು, ಸೆ. ೨೦: ತಿರುಪತಿ ಲಡ್ಡು ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಶುಕ್ರವಾರ ಈ ಸಂಬAಧ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆ (ಸೇವೆಗಳು), ದೀಪಗಳು, ಎಲ್ಲಾ ರೀತಿಯ ಪ್ರಸಾದಗಳ ತಯಾರಿಕೆ ಮತ್ತು ದಾಸೋಹ ಭವನಗಳಲ್ಲಿ ಹೋಮ್ ಬ್ರಾಂಡ್ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಆದೇಶಿಸಲಾಗಿದೆ. ದೇವಸ್ಥಾನಗಳಲ್ಲಿ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸುತ್ತೋಲೆ ತಿಳಿಸಿದೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ೩೦ ಮಂದಿ ಬಂಧನ

ದಾವಣಗೆರೆ, ಸೆ. ೨೦: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡ ಘಟನೆಗೆ ಸಂಬAಧಿಸಿದAತೆ ಮೂವತ್ತು ಮಂದಿಯನ್ನು ಬಂದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೆರವಣಿಗೆ ಸುಗಮವಾಗಿ ಸಾಗುತ್ತಿದ್ದು, ನಿನ್ನೆ ಸಂಜೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿದ್ದಾಗ ಕಲ್ಲು ತೂರಾಟ ಆರಂಭವಾಯಿತು. ಕೆಲವರು ಘೋಷಣೆಗಳನ್ನು ಕೂಗಿದ್ದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೇದೆಗಳಿಗೆ ಗಾಯಗಳಾಗಿವೆ. ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಘಟನೆಗೆ ಸಂಬAಧಿಸಿದAತೆ ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು ೩೦ ಜನರನ್ನು ಬಂದಿಸಲಾಗಿದೆ ಎಂದು ಉಮಾ ಪ್ರಶಾಂತ್ ಹೇಳಿದರು.

೪೨ ದಿನಗಳ ನಂತರ ಕೋಲ್ಕತ್ತಾ ಕಿರಿಯ ವೈದ್ಯರ ಮುಷ್ಕರ ಅಂತ್ಯ

ಕೋಲ್ಕತ್ತಾ, ಸೆ. ೨೦: ಆರ್.ಜಿ. ಕಾರ್ ಆಸ್ಪತ್ರೆಯಲ್ಲಿ ೩೧ ವರ್ಷದ ಕಿರಿಯ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕಿರಿಯ ವೈದ್ಯರು ಇಂದು ಶುಕ್ರವಾರ ಸಂಜೆ ತಮ್ಮ ಮುಷ್ಕರವನ್ನು ಹಿಂತೆಗೆದುಕೊAಡು ಕರ್ತವ್ಯಕ್ಕೆ ಮರಳಿದ್ದಾರೆ. ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೇವೆಗಳನ್ನು ಪುನರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ೪೨ ದಿನಗಳ ಕಾಲ ನಡೆಸಿದ್ದ ಮುಷ್ಕರವನ್ನು ಇಂದು ಕೊನೆಗೊಳಿಸಿದ್ದು, ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಚೇರಿಯಿಂದ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ಕೇಂದ್ರೀಯ ತನಿಖಾ ದಳ ಕಚೇರಿಗೆ ಮೆರವಣಿಗೆ ನಡೆಸಿದ ನಂತರ ವೈದ್ಯರು ಮುಷ್ಕರ ಹಿಂತೆಗೆದುಕೊAಡಿದ್ದಾರೆ. ಸ್ವಾಸ್ಥö್ಯ ಭವನದಿಂದ ಸಿಜಿಒ ಕಾಂಪ್ಲೆಕ್ಸ್ವರೆಗೆ ಸುಮಾರು ೪ ಕಿ.ಮೀ. ದೂರವನ್ನು ಮೆರವಣಿಗೆಯಲ್ಲಿ ಸಾಗಿದರು. ವೈದ್ಯರು ಹೊರರೋಗಿ ವಿಭಾಗದಲ್ಲಿ ಕೆಲಸ ಮಾಡುವುದಿಲ್ಲ ತುರ್ತು ಮತ್ತು ಅಗತ್ಯ ಸೇವೆಗಳಲ್ಲಿ ನಾಳೆಯಿಂದ ಭಾಗಶಃ ಕಾರ್ಯನಿರ್ವಹಿಸುತ್ತಾರೆ.

ಪಾಕ್ ಸೇನೆ ಮೇಲೆ ಭೀಕರ ದಾಳಿ: ೬ ಸೈನಿಕರು ಸಾವು

ಇಸ್ಲಾಮಾಬಾದ್, ಸೆ. ೨೦: ಪಾಕಿಸ್ತಾನದಲ್ಲಿ ಪಾಕ್ ಸೇನೆಯೇ ಸುರಕ್ಷಿತ ವಾಗಿಲ್ಲ. ಪ್ರತಿದಿನ ಅವರ ಮೇಲೆ ದಾಳಿಗಳು ನಡೆಯುತ್ತಿವೆ. ದಕ್ಷಿಣ ವಜೀರಿ ಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆದಿದೆ. ಈ ದಾಳಿಯಲ್ಲಿ ಆರು ಯೋಧರು ಮೃತಪಟ್ಟಿದ್ದು, ಹಲವರು ಗಾಯ ಗೊಂಡಿದ್ದಾರೆ. ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಿಂತಿಲ್ಲ. ಜೂನ್ ತಿಂಗಳಿನಿAದ ಪ್ರತಿ ತಿಂಗಳು ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ಭಯೋತ್ಪಾ ದಕರು ದಾಳಿ ನಡೆಸುತ್ತಿದ್ದಾರೆ. ಪ್ರತಿ ದಾಳಿಯಲ್ಲಿ ಅನೇಕ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು ಹಲವರು ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್ ೨೨ ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರು ಪೊಲೀಸರ ಮೇಲೆ ರಾಕೆಟ್ ದಾಳಿ ನಡೆಸಿದ್ದರು. ಇದರಲ್ಲಿ ಕನಿಷ್ಟ ೧೧ ಸೈನಿಕರು ಸಾವನ್ನಪ್ಪಿದ್ದರು. ಲಾಹೋರ್‌ನಿಂದ ಸುಮಾರು ೪೦೦ ಕಿಲೋ ಮೀಟರ್ ದೂರದಲ್ಲಿರುವ ರಹೀಮ್ ಯಾರ್ ಖಾನ್ ಜಿಲ್ಲೆಯಲ್ಲಿ ಹಲವಾರು ಯೋಧರನ್ನು ಒತ್ತೆಯಾಳಾಗಿ ಇರಿಸಲಾಗಿತ್ತು. ಉಗ್ರರು ರಾಕೆಟ್‌ಗಳ ಮೂಲಕ ದಾಳಿ ನಡೆಸಿದ್ದಾರೆ ಎಂದು ಪಂಜಾಬ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.