ಮಡಿಕೇರಿ, ಸೆ. ೨೦: ವಿಷ್ಣು ಸೇನಾ ಸಮಿತಿ ವತಿಯಿಂದ ಡಾ.ವಿಷ್ಣುವರ್ಧನ್ ಅವರ ೭೪ನೇ ಹುಟ್ಟುಹಬ್ಬವನ್ನು ನಗರದ ಸಾಲುಮರದ ತಿಮ್ಮಕ್ಕ ಪಾರ್ಕ್ ಸಮೀಪದ ಅಂಬೇಡ್ಕರ್ ಭವನದಲ್ಲಿ ತಾ. ೨೨ ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಿಯ ನಾಗರಾಜ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೨ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ನಗರಸಭಾ ಮಾಜಿ ಆಯುಕ್ತೆ ಹಾಗೂ ಕೊಡಗು ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕೆÀ್ಷ ಬಿ.ಬಿ. ಪುಷ್ಪಾವತಿ, ಬೆಂಗಳೂರಿನ ಜೂನಿಯರ್ ವಿಷ್ಣುವರ್ಧನ್ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಗೊಂಬೆ ಕುಣಿತ ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಸಾರ್ವಜನಿಕರಿಗೆ ಅನ್ನದಾನ ನಡೆಯಲಿದೆ ಎಂದು ತಿಳಿಸಿದರು.

ಸಮಿತಿ ಅಧ್ಯಕ್ಷ ರಫೀüಕ್ ಮಾತನಾಡಿ, ಹಲವು ವರ್ಷಗಳಿಂದ ಸಂಘಟನೆ ಮೂಲಕ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಮುಂದುವರೆಯಲಿದ್ದು, ಡಿಸೆಂಬರ್‌ನಲ್ಲಿ ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಈ ಪ್ರಯುಕ್ತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಹ ಕಾರ್ಯದರ್ಶಿ ಪ್ರವೀಣ್ ಲೋಬೋ, ಖಜಾಂಚಿ ಪಿ.ಐ.ಅನ್ಸಾರ್, ನಿರ್ದೇಶಕರಾದ ಕೆ.ಕೆ.ಜಾನ್ಸನ್, ಬಿ.ಜಿ.ರಮೇಶ್ ರೈ ಉಪಸ್ಥಿತರಿದ್ದರು.