ಮಡಿಕೇರಿ, ಸೆ. ೧೯ : ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ೫ ಕೋಟಿ ರೂ. ಬಿಡುಗಡೆಯಾಗಿದ್ದು, ಪ್ರಸಕ್ತ ವರ್ಷದಲ್ಲಿ ನೂತನ ಕ್ರೀಡಾ ವಸತಿ ನಿಲಯ ನಿರ್ಮಾಣ ಸಂಬAಧ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಎ.ಎಸ್.ಪೊನ್ನಣ್ಣ ಸಭೆ ನಡೆಸಿ ಜಾಗ ಪರಿಶೀಲನೆ ಮಾಡಿದರು.

ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ ಅವರು ಸ್ವಾತಂತ್ರö್ಯ ಪೂರ್ವದಿಂದಲೂ ಪೊನ್ನಂಪೇಟೆಯಲ್ಲಿ ಪ್ರೌಢಶಾಲೆ ಇತ್ತು. ಪ್ರೌಢಶಾಲೆಗೆ ಒಂದು ಇತಿಹಾಸವಿದ್ದು, ಇದರ ಅಸ್ತಿತ್ವವನ್ನು ಉಳಿಸಿ ಕೊಳ್ಳುವಂತಾಗಬೇಕು. ಜೊತೆಗೆ ಇಲ್ಲಿನ ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳಿಗೂ ಅನುಕೂಲ ವಾಗಬೇಕು ಎಂದು ಪ್ರತಿಪಾದಿಸಿದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ಸರ್ಕಾರದಿಂದ ಪೊನ್ನಂಪೇಟೆಯ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಬಜೆಟ್‌ನಲ್ಲಿ ೫ ಕೋಟಿ ರೂ. ಪ್ರಕಟಿಸಲಾಗಿತ್ತು, ಅದರಂತೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ಆರಂಭಕ್ಕೆ ಚಾಲನೆ ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯವಿರುವ ಭೂಮಿಯನ್ನು ಕ್ರೀಡಾ ಇಲಾಖೆಗೆ ಒದಗಿಸಬೇಕಿದೆ ಎಂದು ತಿಳಿಸಿದರು.

ಬಳಿಕ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ಆವರಣದ ಜಾಗ ವೀಕ್ಷಿಸಿದ ಶಾಸಕರು ಅಗತ್ಯವಿರುವ ಭೂಮಿಯನ್ನು ಸರ್ವೇ ಮಾಡಿ ನೀಲನಕ್ಷೆ ತಯಾರಿಸುವಂತೆ ಸಂಬAಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು. ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶೇಷವಾಗಿ ರೂ. ೫ ಕೋಟಿ ಬಿಡುಗಡೆ ಮಾಡಿದ್ದು, ಅದನ್ನು ಸದ್ಬಳಕೆ ಮಾಡಬೇಕು. ಶೀಘ್ರ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.

ಪ್ರಸ್ತುತ ವಸತಿ ನಿಲಯ ಇರುವ ಜಾಗ ಸರಕಾರದ್ದಾಗಿದ್ದು, ಈ ಹಿಂದೆ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯವಾಗಿತ್ತು, ನಂತರದಲ್ಲಿ ಶಾಲೆ ನಡೆಸಲಾಗುತ್ತಿತ್ತು. ಬಹಳ ಹಳೆಯ ಕಟ್ಟಡವಾಗಿರುವದರಿಂದ ಇದೀಗ ಶಿಥಿಲಾವಸ್ಥೆಯಲ್ಲಿದ್ದು, ನೂತನ ವಸತಿ ನಿಲಯ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಸರಕಾರ ರೂ. ೫ ಕೋಟಿ ಮಂಜೂರು ಮಾಡಿದ್ದು, ನೂತನ ವಸತಿ ನಿಲಯ ನಿರ್ಮಾಣವಾಗಲಿದೆ. ಪ್ರಸ್ತುತ ಇರುವ ಕಟ್ಟಡದ ಸನಿಹದ ಖಾಲಿ ಜಾಗ ಗುರುತಿಸಲಾಗಿದ್ದು, ನೂತನ ವಸತಿ ನಿಲಯ ನಿರ್ಮಾಣವಾಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಮಾಹಿತಿ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಮೋಹನ್ ಕುಮಾರ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್, ಪ್ರಮುಖರಾದ ಪಿ.ಕೆ.ಪೊನ್ನಪ್ಪ, ಪ್ರಮೋದ್ ಗಣಪತಿ, ಸಾಜಿ ಅಚ್ಚುತ್ತನ್, ಇತರರು ಇದ್ದರು