ಮಡಿಕೇರಿ, ಸೆ. ೨೦: ಪ್ರಸಕ್ತ ಸಾಲಿನಲ್ಲಿ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ hಣಣಠಿs://ssಠಿ. ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ. gov.iಟಿ ರಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ೨.೫೦ ಲಕ್ಷ), ವಿದ್ಯಾರ್ಥಿಯ ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿಸಿರಬೇಕು) ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಪೈಡ್ ಪ್ರಮಾಣಪತ್ರ, ಪ್ರಸಕ್ತ ಕೋರ್ಸಿನ ಶುಲ್ಕ ರಶೀದಿ ಪ್ರತಿ, ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ದೂ.ಸಂ. ೯೪೮೦೮೪೩೧೫೭, ೯೮೮೦೨೩೨೭೭೩ ಅಥವಾ ಕಚೇರಿಗೆ ನೇರ ಭೇಟಿ ನೀಡಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ವೀರಾಜ ಪೇಟೆ ತಾ. ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.