ಮಡಿಕೇರಿ, ಸೆ. ೨೦: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ hಣಣಠಿs://ಣತಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು (ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ): ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ (ಆದಾಯದ ಮಿತಿ ೨.೫೦ಲಕ್ಷ), ಆಧಾರ್ ಕಾರ್ಡ್ : ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು (ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು), ದೂರವಾಣಿ ಸಂಖ್ಯೆ : ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು. ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ. ಅಧ್ಯಯನ-ಬೋನೋಫೈಡ್ ಪ್ರಮಾಣ ಪತ್ರ. ಪ್ರಸಕ್ತ ಕೋರ್ಸ್ನ ಶುಲ್ಕ ರಶೀದಿ ಪ್ರತಿ. ತಂದೆ, ತಾಯಿ/ ಪೋಷಕರ ಆಧಾರ್ ಕಾರ್ಡ್ಪ್ರತಿ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: (ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ) ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ (ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ (೧ ರಿಂದ ೮ ನೇ ತರಗತಿ) ಆದಾಯದ ಮಿತಿ ೬ ಲಕ್ಷ ಹಾಗೂ ೯ ನೇ, ೧೦ ನೇ ತರಗತಿ ಆದಾಯದ ಮಿತಿ ೨.೫೦ ಲಕ್ಷ), ಆಧಾರ್ ಕಾರ್ಡ್ : ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು (ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು), ದೂರವಾಣಿ ಸಂಖ್ಯೆ ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು. ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಮತ್ತು ಎಸ್‌ಟಿಎಸ್ ಸಂಖ್ಯೆ ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ. ತಂದೆ, ತಾಯಿ/ಪೋಷಕರ ಆಧಾರ್ ಕಾರ್ಡ್ಪ್ರತಿ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತು ಷರತ್ತುಗಳನ್ನು ಚೆನ್ನಾಗಿ ಓದಿಕೊಂಡು ಅರ್ಥೈಸಿಕೊಂಡು ಜಾಗರೂಕತೆಯಿಂದ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಎಸ್‌ಹೆಚ್‌ಜಿ ಗುಂಪು ರಚನೆಗೆ

ಪ್ರಸಕ್ತ ಸಾಲಿನ ದೀನದಯಾಳ ಅಂತ್ಯೋದಯ ಯೋಜನೆ ನಲ್ಮ್ ರಾಷ್ಟಿçÃಯ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯಮಶೀಲತೆ ಮತ್ತು ಎಸ್‌ಹೆಚ್‌ಜಿ ಗುಂಪು ರಚನೆಗಾಗಿ ಮಡಿಕೇರಿ ನಗರ ಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಉದ್ದೇಶಿಸಿರುವ ಚಟುವಟಿಕೆಯ ಬಗ್ಗೆ ಅನುಭವ ಹೊಂದಿದ್ದರೆ/ ತರಬೇತಿ ಪಡೆದಿದ್ದರೆ ಪ್ರಮಾಣ ಪತ್ರ, ಯೋಜನಾ ವರದಿ, ಬಿಪಿಎಲ್ ಪಡಿತರ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ, ವೈಯಕ್ತಿಕ ಉಳಿತಾಯ ಖಾತೆಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ, ಅಂಗವಿಕಲರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ರೂ. ೨೦ ಛಾಪಾ ಕಾಗದದ ಮೇಲೆ ನಲ್ಮ್ ಯೋಜನೆಯ ಪೋಷಣ ಪ್ರಮಾಣ ಪತ್ರ ನೋಟರಿಯಿಂದ ದೃಢೀಕರಿಸಿದ ಪ್ರತಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ತಾ.೨೦ ಕೊನೆಯ ದಿನವಾಗಿದೆ. ನಂತರ ಬಂದAತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಸೂಚನೆ: ಮುಂದೆ ಹಾಜರುಪಡಿಸಬಹುದಾದಂತಹ ಅಗತ್ಯ ದಾಖಲಾತಿಗಳನ್ನು ಒದಗಿಸುವ ಷರತ್ತಿಗೆ ಕಡ್ಡಾಯವಾಗಿ ಒಳಪಡಿಸಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೇಂದ್ರ ಸರ್ಕಾರದ ರಾಷ್ಟಿçÃಯ ವಿದ್ಯಾರ್ಥಿ ವೇತನ ಯೋಜನೆಯಡಿ ೨೦೨೪-೨೫ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಪ್ರಿ-ಮೆಟ್ರಿಕ್ ಹಾಗೂ ಪೋಸ್ಟ್ಮೆಟ್ರಿಕ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಎನ್‌ಎಸ್‌ಪಿ ಪೋರ್ಟಲ್ ಮೂಲಕ hಣಣಠಿs://sಛಿhoಟಚಿಡಿshiಠಿs.gov.iಟಿ ತಂತ್ರಾAಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಯೋಜನೆಯ ಸೌಲಭ್ಯವನ್ನು ವಿಶೇಷಚೇತನ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್. ಮೊ.ಸಂ- ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ. ಮೊ.ಸಂ-೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ. ೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.