ಸೋಮವಾರಪೇಟೆ, ಸೆ. ೧೮: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೂರ್ನಾಡು ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ, ಅಲ್ಲಿನ ಕೊಡವ ಸಮಾಜ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ನಲ್ಲಿ ಮಡಿಕೇರಿ ತಂಡವನ್ನು ಸೋಲಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾದರು. ರೋಚಕ ಸೆಮಿಫೈನಲ್ನಲ್ಲಿ ವೀರಾಜಪೇಟೆ ತಾಲ್ಲೂಕು ತಂಡದ ವಿರುದ್ಧ ಗೆಲವು ಸಾಧಿಸಿ ಫೈನಲ್ ಪ್ರವೇಶಿಸಿದ್ದರು.
ತಂಡದ ಧನ್ಯ ಯಡೂರು, ಪುಷ್ಪಾಂಜಲಿ ಯಡೂರು ಅವರುಗಳು ಡಬಲ್ಸ್ನಲ್ಲಿ ಗೆಲುವು ಸಾಧಿಸಿದರೆ, ಜೀವಿತ ಹಿರಿಕರ ಸಿಂಗಲ್ಸ್ನಲ್ಲಿ ಜಯ ದಾಖಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ತರಬೇತಿ ನೀಡಿದ್ದರು. ಮೂರ್ನಾಡು ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಪಂದ್ಯಾಟದ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ವಿಜೇತ ತಂಡ ಅ.೧೫ ಮತ್ತು ೧೬ರಂದು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ತಂಡವನ್ನು ಪ್ರತಿನಿಧಿಸಲಿದೆ.