ವೀರಾಜಪೇಟೆ, ಸೆ. ೧೯: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘ ನಿಯಮಿತ ವತಿಯಿಂದ ತಾ.೨೫ ರಂದು ವೀರಾಜಪೇಟೆ ಭಾರತೀಯ ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುತಾತ್ಮರ ದಿನಾಚರಣೆಯ ಅಂಗವಾಗಿ ಯೋಧರ ಸ್ಮಾರಕ ಸ್ತಂಭದ ಆವರಣದಲ್ಲಿ ಜಿಲ್ಲಾ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ದೇಶ ರಕ್ಷಣೆಗಾಗಿAdd Newsಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಗುವುದು ಎಂದು ಹೇಳಿದರು.
ಉಪಾಧ್ಯಕ್ಷ ರಾಜ ಚಂದ್ರಶೇಖರ್ ಮಾತನಾಡಿ, ಹುತಾತ್ಮರ ದಿನಾಚರಣೆಯಲ್ಲಿ ಅತಿಥಿಗಳಾಗಿ ಮಹಾವೀರ ಚಕ್ರ ಪಡೆದ ನಿವೃತ್ತ ಕರ್ನಲ್ ಪುಟ್ಟಿಚಂಡ ಗಣಪತಿ, ಮಡಿಕೇರಿ ಮಿಲಿಟರಿ ಕ್ಯಾಂಟೀನ್ ವ್ಯವಸ್ಥಾಪಕರಾದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಮುಲ್ಲೆರ ಕಾವೇರಪ್ಪ, ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ವೀರಾಜಪೇಟೆ ತಹಶೀಲ್ದಾರ್ ರಾಮಚಂದ್ರ, ಡಿ.ವೈ.ಎಸ್.ಪಿ ಮೋಹನ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಕೆ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಭಾಗವಹಿಸುತ್ತಾರೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಪುಗ್ಗೆರ ನಂದಾ, ಖಜಾಂಚಿ ತೋರೆರ ಪೂವಯ್ಯ, ನಿರ್ದೇಶಕ ಅಣ್ಣಳಮಾಡ ಸುಬ್ಬಯ್ಯ ಉಪಸ್ಥಿತರಿದ್ದರು.