ಮಡಿಕೇರಿ, ಸೆ. ೨೦: ಅಕ್ರಮವಾಗಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಈರ್ವರನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸರು ಬಂದಿಸಿ, ದಂತಗಳನ್ನು ವಶಪಡಿಸಿಕೊಂಡಿದ್ದಾರೆ.

ತಾ.೧೯ರAದು ಕುಶಾಲನಗರ, ಹೆಬ್ಬಾಲೆ ಬಳಿ ಚನ್ನಕೇಶವ ಮತ್ತು ಬಸವರಾಜು ಎಂಬ ವ್ಯಕ್ತಿಗಳು ಅಕ್ರಮವಾಗಿ ಆನೆಯ ೨ ದಂತಗಳನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂದಿಸಿ ಆನೆಯ ಎರಡು ದಂತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಎಸ್.ಎಸ್. ಕಾಶಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ. ಸಿ.ಯು. ಸವಿ, ಹೆಡ್‌ಕಾನ್ಸ್ಟೇಬಲ್‌ಗಳಾದ ಶೇಖರ್, ರಾಘವೇಂದ್ರ, ಯೋಗೇಶ್ ಎ.ಜಿ., ಉಮೇಶ್, ಮೋಹನ ಮತ್ತು ಕಾನ್ಸ್ಟೇಬಲ್ ಸ್ವಾಮಿ ಪಾಲ್ಗೊಂಡಿದ್ದರು.