ವೀರಾಜಪೇಟೆ, ಸೆ. ೨೦: ಈ ವರ್ಷದ ಸೀರತುನ್ನಬಿ ಪ್ರಯುಕ್ತ ಜಮಾಅತೆ ಇಸ್ಲಾಮೀ ಹಿಂದ್ ವೀರಾಜಪೇಟೆ ಸ್ಥಾನೀಯ ಶಾಖೆ ವತಿಯಿಂದ ತಾ. ೨೧ ರಂದು (ಇಂದು) ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರö್ಯವಂತ ಎಂಬ ವಿಷಯದಲ್ಲಿ ಗಣ್ಯರ ಸಭೆಯೊಂದು ಬ್ರೆöÊಟ್ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ ೪.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ವೀರಾಜಪೇಟೆ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ , ತಿತಿಮತಿಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚಾರ್ಲ್ಸ್ ಡಿಸೋಜ ಉಪಸ್ಥಿತರಿರುವರು. ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಜತೆ ಕಾರ್ಯದರ್ಶಿ ರಿಯಾಜ್ ಅಹಮದ್ ರೋಣ ಅಧ್ಯಕ್ಷತೆ ವಹಿಸಲಿದ್ದಾರೆ.