ಮಡಿಕೇರಿ, ಸೆ. ೨೦: ಕುಶಾಲ ನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ತಾ. ೨೫ ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ತಿಳಿಸಿದ್ದಾರೆ.

ನಗರದ ಪತ್ರಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾ. ೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿರುವ ಬೆಳ್ಳಿ ಮಹೋತ್ಸವ ಸಮಾರಂಭದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ನೆರವೇರಿಸಲಿದ್ದಾರೆ. ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ಮಂತರ್‌ಗೌಡ ಮತ್ತು ಮಾಜಿ ಸಚಿವರಾದ ಎಂ.ಪಿ. ಅಪ್ಪಚ್ಚು ರಂಜನ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ೨೫ ವರ್ಷಗಳ ಕಾಲ ಸಂಘದ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ಭಾಷಣ ಮಾಡಲಿದ್ದಾರೆ. ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ರಾಜ್ಯ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ ಇವರುಗಳು ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಿದ್ದಾರೆ. ಪತ್ರಿಕಾ ವಿತರಕ ವಿ.ಪಿ. ಪ್ರಕಾಶ್, ಪುರಸಭೆ ಸಿಬ್ಬಂದಿ ಮೋಹನ್‌ಕುಮಾರ್, ವೈದ್ಯ ಡಾ. ಕಿಶೋರ್ ಕುಮಾರ್, ಸಮಾಜ ಸೇವಕಿ ಪದ್ಮ ಪುರುಷೋತ್ತಮ್, ಅನಾಥ ಶವಗಳ ಅಂತ್ಯಕ್ರಿಯೆ ನೆರವೇರಿಸುವ ಆಟೋ ಚಾಲಕ ಮುನೀರ್ ಇವರುಗಳು ಸನ್ಮಾನ ಸ್ವೀಕರಿಸಲಿದ್ದಾರೆ.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರÀಕರ್ತರ ಸಂಘದ ಸದಸ್ಯರ ನಡುವೆ ನಡೆದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದ ತಂಡದ ಸದಸ್ಯರಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಹಾಗೂ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮತ್ತಪ್ಪ ಬಹುಮಾನ ವಿತರಿಸಲಿದ್ದಾರೆ ಎಂದು ಚಂದ್ರಮೋಹನ್ ಮಾಹಿತಿಯಿತ್ತರು.

ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಸಂಘದ ರಾಷ್ಟಿçÃಯ ಸಮಿತಿ ಸದಸ್ಯ ಸುನಿಲ್ ಪೊನ್ನೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ಟಿ.ಎನ್. ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.

ಸಂಘದ ಕಾರ್ಯದರ್ಶಿ ಕೆ.ಕೆ. ನಾಗರಾಜಶೆಟ್ಟಿ ಮಾತನಾಡಿ, ತಾಲೂಕು ಸಂಘದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮತ್ತು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ನೆರವೇರಿಸಲಿದ್ದಾರೆ ಎಂದರು.

ಪ್ರಚಾರ ಸಮಿತಿ ಸಂಚಾಲಕ ರಘು ಹೆಬ್ಬಾಲೆ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ಹಿರಿಯ ಪತ್ರಕರ್ತ ಬಿ.ಆರ್. ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಆರಂಭಗೊAಡ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ ಎಂದರು.

ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಬೆಳ್ಳಿ ಹಬ್ಬ ಸ್ವಾಗತ ಸಮಿತಿ ಸಹ ಸಂಚಾಲಕ ವಿನೋದ್ ಹೆಚ್.ವಿ., ಕ್ರೀಡಾ ಸಂಚಾಲಕ ಶಿವರಾಜ್ ಕೆ.ಜೆ. ಇದ್ದರು.