ಕುಶಾಲನಗರ, ಸೆ. ೨೦: ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಈ ತಿಂಗಳ ೨೫ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಾಲೂಕು ತಹಶೀಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.
ತಾಲೂಕು ತಹಶೀಲ್ದಾರ್ ಹಾಗೂ ಚುನಾವಣೆ ಅಧಿಕಾರಿಯಾಗಿರುವ ಕಿರಣ್ ಜಿ ಗೌರಯ್ಯ ಅವರು ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಅವಕಾಶ ಕಲ್ಪಿಸುತ್ತಿರುವುದು ನಿಯಮಬಾಹಿರವಾಗಿದೆ.
ತಹಶೀಲ್ದಾರ್ ಸರ್ಕಾರದ ಕೈ ಗೊಂಬೆಯAತೆ ಕೆಲಸ ನಿರ್ವಹಿಸುತ್ತಿರುವುದಾಗಿ ಆರೋಪಿಸಿದ ಬಿಜೆಪಿ ಪ್ರಮುಖರು ತಕ್ಷಣ ಈ ನೋಟಿಸ್ ಅನ್ನು ಹಿಂಪಡೆಯುವAತೆ ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಎಂ.ಎA. ಚರಣ್, ಪೌರಾಡಳಿತ ಕಾಯಿದೆ ಹೆಸರಿನಲ್ಲಿ ತಹಶೀಲ್ದಾರ್ ಗೊಂದಲ ಮೂಡಿಸಿದ್ದಾರೆ. ನಾಮನಿರ್ದೇಶಿತ ಸದಸ್ಯರುಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ. ತಕ್ಷಣ ಈ ಬಗ್ಗೆ ಕ್ರಮ ಕೈಗೊಂಡು ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ. ಮನು ಮಾತನಾಡಿ, ತಹಶೀಲ್ದಾರ್ ಸರ್ಕಾರದ ಕೈಗೊಂಬೆಯAತೆ ಕೆಲಸ ನಿರ್ವಹಿಸುತ್ತಿರುವುದು ಕಂಡುಬAದಿದೆ. ಸಮರ್ಪಕವಾಗಿ ಸಮಜಾಯಿಶಿಕೆ ನೀಡುತ್ತಿಲ್ಲ. ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಕುಶಾಲನಗರ ಪಟ್ಟಣ ಪಂಚಾಯಿತಿಗೆ ಇದೀಗ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಗಾದಿಯ ಚುನಾವಣೆ ನಡೆಸುತ್ತಿರುವ ಸಂದರ್ಭ ನಿಯಮಬಾಹಿರವಾಗಿ ಮುಳ್ಳುಸೋಗೆ ಭಾಗದಿಂದ ಇಬ್ಬರು ನಾಮ ನಿರ್ದೇಶಿತ ಸದಸ್ಯರನ್ನು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮತದಾನ ಮಾಡುವಂತೆ ಮಾಡುತ್ತಿರುವುದು ಗೊಂದಲಮಯ ವಿಷಯವಾಗಿದೆ. ತಕ್ಷಣ ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯ ಜಗದೀಶ್ ಸೇರಿದಂತೆ ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಶೀಲ್ದಾರ್ ಅವರ ನಿಯಮಬಾಹಿರ ಕೆಲಸದ ವಿರುದ್ಧ ಘೋಷಣೆ ಕೂಗಿದರು. ಬೆಳಗ್ಗಿನಿಂದ ಸಂಜೆ ತನಕ ಪ್ರತಿಭಟನೆ ಮುಂದುವರೆದಿದ್ದು, ಕ್ರಮ ಕೈಗೊಳ್ಳದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಅಶೋಕರಿಂದ ತರಾಟೆಗೆ
ಈ ನಡುವೆ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರದ ವಿರೋಧ ಪಕ್ಷದ ನಾಯಕ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ತಹಶೀಲ್ದಾರ್ ಕಿರಣ್ ಜಿ .ಗೌರಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಯಾವುದೇ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ .
ಅನಗತ್ಯವಾಗಿ ಗೊಂದಲ ಮಾಡುವುದು ಬೇಡ. ತಾನು ಕೂಡ ಕಂದಾಯ ಇಲಾಖೆಯ ಹಾಗೂ ಗೃಹ ಸಚಿವರಾಗಿ ಕೆಲಸ ನಿರ್ವಹಿಸಿದ್ದೇನೆ. ಅನಗತ್ಯವಾಗಿ ಕರ್ತವ್ಯ ಲೋಪದ ಅಡಿಯಲ್ಲಿ ಸಿಲುಕುದಂತೆ ಎಚ್ಚರವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ಚುನಾವಣೆ ವಿಷಯದಲ್ಲಿ ಕೆಟ್ಟ ಪರಂಪರೆ ಅನಾಹುತಕ್ಕೆ ಅವಕಾಶ ಕಲ್ಪಿಸಬಾರದು ಎಂದು ಸ್ಥಳದಲ್ಲಿ ತಹಶೀಲ್ದಾರ್ ಕಿರಣ್ ಜಿ ಗೌರಯ್ಯ ಅವರಿಗೆ ಸೂಚನೆ ನೀಡಿ ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಅಶೋಕ್ ಹೇಳಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಸುವಿನ್, ಕುಶಾಲನಗರ ತಾಲೂಕು ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್ ಎಸ್ ಅಶೋಕ್, ಮಾಜಿ ಸದಸ್ಯರಾದ ದೀಪಕ್, ಮಂಜುಳಾ, ಸುನಿಲ್ ಕುಶಾಲನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಪುರಸಭೆ ಸದಸ್ಯರಾದ ಡಿ ಕೆ ತಿಮ್ಮಪ್ಪ ,ಅಮೃತರಾಜ್ ಜಯವರ್ಧನ್, ರೇಣುಕಾ ಪ್ರಮುಖರಾದ ಎಂ.ಡಿ. ಕೃಷ್ಣಪ್ಪ ,ಉಮಾಶಂಕರ್, ಬಿಜೆಪಿ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಇದ್ದರು.