ನಾಪೋಕ್ಲು, ಸೆ. ೨೦: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಕೆಪಿಎಸ್ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಎನ್. ಎಸ್ ಉದಯಶಂಕರ್ ಹೇಳಿದರು.

ಕೆಪಿಎಸ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ವಿಷಯಗಳಷ್ಟೇ ಮುಖ್ಯವಾಗಬಾರದು. ಪಠ್ಯೇತರ ಚಟುವಟಿಕೆಗಳಲ್ಲೂ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.

ಬಿಆರ್‌ಸಿ ಮಂಜುಳ ಚಿತ್ರಾಪುರ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.