ಹೆಬ್ಬಾಲೆ: ಕರ್ನಾಟಕ ಅರಣ್ಯ ಇಲಾಖೆ, ಮಡಿಕೇರಿ ಉಪ ವಿಭಾಗ ಹಾಗೂ ಸೋಮವಾರಪೇಟೆ ವಲಯದ ವತಿಯಿಂದ ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ವನಮಹೋತ್ಸವವನ್ನು ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಭಾರತ ದೇಶ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾಗಿದೆ. ಸಂವಿಧಾನ ಬದ್ಧವಾಗಿ ಬಂದಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಬಸವರಾಜ ಶೆಟ್ಟಿ, ಶಿಕ್ಷಕ ಮೆ.ನಾ. ವೆಂಕಟನಾಯಕ್, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಖಜಾಂಚಿ ಉಮೇಶ್, ಉಪವಲಯ ಅರಣ್ಯ ಅಧಿಕಾರಿಗಳಾದ ಭರತ್, ಚಂದ್ರೇಶ್, ಲೋಹಿತ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭ ವಿದ್ಯಾರ್ಥಿ ಪರಿಸರ ರಕ್ಷಣೆ ಹಾಗೂ ಪ್ರಜಾಪ್ರಭುತ್ವ ಮಹತ್ವ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.ವೀರಾಜಪೇಟೆ: ವೀರಾಜಪೇಟೆ ತಾಲೂಕು ಆಡಳಿತ, ವೀರಾಜಪೇಟೆ ಪುರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವೀರಾಜಪೇಟೆಯಲ್ಲಿ ಅಂರ್ರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.
ಭಾರತದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು. ಸಂವಿಧಾನದ ಆಶಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರಜಾಪ್ರಭುತ್ವ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕೆಂದು ಈ ಸಂದರ್ಭದಲ್ಲಿ ಸಂದೇಶ ನೀಡಲಾಯಿತು.
ಈ ಸಂದರ್ಭ ತಹಶೀಲ್ದಾರ್ ಪ್ರದೀಪ್, ವೀರಾಜಪೇಟೆ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿ ಹರೀಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೀತಿ ಚಿಕ್ಕಮಾದಯ್ಯ, ಸೇರಿದಂತೆ ಇನ್ನಿತರ ಅಧಿಕಾರಿಗಳು, ಗಣ್ಯರು, ಮುಖಂಡರುಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.ಸಿದ್ದಾಪುರ: ಅಂರ್ರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವೀರಾಜಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ಕಣ್ಣಂಗಾಲ ಗ್ರಾಮದ ಅಯ್ಯಪ್ಪ ದೇವರಕಾಡು ಜಾಗದಲ್ಲಿ ಗಿಡಗಳನ್ನು ನೆಡಲಾಯಿತು.
ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, ಪ್ರತಿಯೊಬ್ಬರು ಗಿಡಮರಗಳನ್ನು ನೆಟ್ಟು ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಕರೆ ನೀಡಿದರು. ಪರಿಸರವನ್ನು ಸಂರಕ್ಷಣೆ ಮಾಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭ ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗ್ರೀಷ್ಮ. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕಲ್ಪೇಷ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಧರಣಿ ಹಾಗೂ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ಹಾಗೂ ಉಪವಲಯ ಅರಣ್ಯ ಅಧಿಕಾರಿಗಳಾದ ಜನಾರ್ದನ ದೇವರಾಜ್, ಸಂಜಿತ್ ಸೋಮಯ್ಯ, ಅರುಣ್ ಹಾಗೂ ಆರ್ಆರ್ಟಿ ತಂಡ ಮತ್ತು ಆನೆ ಕಾರ್ಯಪಡೆಯ ತಂಡದ ಸಿಬ್ಬಂದಿಗಳು ಹಾಜರಿದ್ದರು.ಕುಶಾಲನಗರ: ಅಂರ್ರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕೆದಕಲ್ ಗ್ರಾಮ ಪಂಚಾಯಿತಿ ಆವರಣ ಮತ್ತು ಭದ್ರಕಾಳಿ ದೇವರಕಾಡಿನಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಅರಣ್ಯ ಇಲಾಖೆ ಆನೆಕಾಡು ಮೀಸಲು ಅರಣ್ಯ ವಿಭಾಗದ ಉಪ ವಲಯ ಅರಣ್ಯ ಅಧಿಕಾರಿ ದೇವಯ್ಯ ಮತ್ತು ಸಿಬ್ಬಂದಿಗಳು, ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖರು ಪಾಲ್ಗೊಂಡಿದ್ದರು.ಸೋಮವಾರಪೇಟೆ: ಅಂರ್ರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ಇಲಾಖೆ ಗಳ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಇಲ್ಲಿನ ಜೇಸೀ ವೇದಿಕೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮಹತ್ವ, ಪ್ರಜಾಪ್ರಭುತ್ವ ರಾಷ್ಟçದಲ್ಲಿ ಇರುವ ಹಕ್ಕುಗಳು ಮತ್ತು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು.
ನಂತರ ಸಂವಿಧಾನದ ಪ್ರಸ್ತಾವನೆಯ ಪೀಠಿಕೆ ಯನ್ನು ಓದಿ, ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಈ ಸಂದರ್ಭ ಪ.ಪಂ. ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಮುಖ್ಯಾಧಿ ಕಾರಿ ನಾಚಪ್ಪ, ಎಸಿಎಫ್ ಗೋಪಾಲ್, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಬಿ.ಈ. ಜಯೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.