ಸೋಮವಾರಪೇಟೆ, ಸೆ. ೧೯: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ಜಾತಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಬೇಕೆಂದು ಕಾಂಗ್ರೆಸ್ ಎಸ್.ಸಿ. ಮೋರ್ಚಾದಿಂದ ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.
ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿಬಿಎಂಪಿ ಗುತ್ತಿಗೆದಾರರೊಂದಿಗೆ ಮಾತನಾಡುವ ಸಂದರ್ಭ ಶಾಸಕ ಮುನಿರತ್ನ ಅವರು, ಗೌಡ ಹಾಗೂ ಪರಿಶಿಷ್ಟ ಜಾತಿಯ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಮಂಜುನಾಥ್, ನಗರ ಘಟಕದ ಚೇತನ್, ಪದಾಧಿಕಾರಿಗಳಾದ ಜೇಕಬ್ ಸೈಮನ್, ರಘು ಅವರುಗಳು ಉಪಸ್ಥಿತರಿದ್ದರು.