ಸೋಮವಾರಪೇಟೆ, ಸೆ. ೨೦: ಪಟ್ಟಣದ ಮಹದೇಶ್ವರ ಬ್ಲಾಕ್ನ ಹೊಸ ಬಡಾವಣೆಯ ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಗೌರಿ ಗಣಪತಿ ಉತ್ಸವ ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿ ಬಳಗದ ಅಧ್ಯಕ್ಷ, ಅಬ್ಬೂರುಕಟ್ಟೆಯ ರವಿಕುಮಾರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ರವಿಕುಮಾರ್ ಅವರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸೌಕರ್ಯಗಳನ್ನು ಒದಗಿಸುತ್ತಾ ಬರುತ್ತಿದ್ದು, ಆಲೂರು-ಸಿದ್ದಾಪುರ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ, ಲೋಟ, ಕಾಜೂರು ಎಡವಾರೆ ಶಾಲಾ ಮಕ್ಕಳಿಗೆ ಪುಸ್ತಕ ಸೇರಿದಂತೆ ಇತರ ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ನೆನಪಿನ ಕಾಣಿಕೆಗಳು, ಅಭಿನಂದನಾ ಪತ್ರಗಳು, ಸರ್ಕಾರಿ ಶಾಲಾ ಮಕ್ಕಳಿಗೆ ಗುರುತಿನ ಚೀಟಿ, ಟ್ಯಾಗ್ಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ಸೇವಾ ಸಮಿತಿಯ ಅಧ್ಯಕ್ಷ ಮನೋಜ್ ತಿಳಿಸಿದರು.
ಈ ಸಂದರ್ಭದ ಸಿದ್ಧಿ ವಿನಾಯಕ ಸೇವಾ ಸಮಿತಿಯ ಉಪಾಧ್ಯಕ್ಷ ನಂದೀಶ್, ಕಾರ್ಯದರ್ಶಿ ಸುಮಂತ್, ಸಹ ಕಾರ್ಯದರ್ಶಿ ಸಂತೋಷ್, ಖಜಾಂಚಿ ಚಂದ್ರು, ಗೌರವ ಅಧ್ಯಕ್ಷ ಚಂದ್ರಶೇಖರ್ ಭಟ್, ಮೋಹನ್, ನಿರ್ದೇಶಕರುಗಳಾದ ಅಜಯ್, ಅಜಿತ್, ದೀಪು ಸೇರಿದಂತೆ ಇತರರು ಉಪಸ್ಥಿತರಿದ್ದರು.