ಕೂಡಿಗೆ, ಸೆ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಜೇನುಕಲ್ಲು ಬೆಟ್ಟ (ಭುವನಗಿರಿ) ಹಾಲು ಉತ್ಪಾದಕರ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ತಾ. ೨೧ ರಂದು (ಇಂದು) ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಟಿ.ಕೆ. ಚಂದ್ರಶೇಖರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ವಿಸ್ತಾರಣಾಧಿಕಾರಿ ಬಿ.ವಿ. ವೀಣಾ, ಸ್ಥಳದಾನಿ ಎಂ. ಕೃಷ್ಣ ಭಟ್, ಆರ್.ಆರ್. ಕುಮಾರ್ ಆಗಮಿಸಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಂ. ಬಸವರಾಜ್ ತಿಳಿಸಿದ್ದಾರೆ.