ಸೋಮವಾರಪೇಟೆ, ಸೆ. ೨೦: ಪಟ್ಟಣ ಪಂಚಾಯಿತಿ ವತಿಯಿಂದ ಬಾಣಾವರದಲ್ಲಿ ನಿರ್ಮಾಣ ಹಂತದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಪ.ಪಂ. ಅಧ್ಯಕ್ಷೆ ಜಯಂತಿ ಶಿವಕುಮಾರ್ ಒಳಗೊಂಡ ನಿಯೋಗ ತೆರಳಿ ಕಾಮಗಾರಿಗಳನ್ನು ಪರಿಶೀಲಿಸಿತು. ಹಲವಾರು ವರ್ಷಗಳ ಹಿಂದೆಯೇ ಘಟಕ ನಿರ್ಮಾಣ ಕಾಮಗಾರಿ ಆರಂಭಗೊAಡಿದ್ದರೂ ಈವರೆಗೆ ಪೂರ್ಣಗೊಳ್ಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅಧ್ಯಕ್ಷರು, ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ತ್ಯಾಜ್ಯ ವಿಲೇವಾರಿಗೆ ಕ್ರಮ ವಹಿಸುವಂತೆ ಸೂಚಿಸಿದರು.

ಈ ಸಂದರ್ಭ ಪ.ಪಂ. ಉಪಾಧ್ಯಕ್ಷೆ ಮೋಹಿನಿ, ಮುಖ್ಯಾಧಿಕಾರಿ ನಾಚಪ್ಪ, ಅಭಿಯಂತರ ವಿಜಯ ಕುಮಾರ್ ಅವರುಗಳು ಉಪಸ್ಥಿತರಿದ್ದರು.