ವೀರಾಜಪೇಟೆ, ಸೆ. ೨೧: ಬೇತ್ರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ ಘಟನೆ ನಡೆದಿದೆ.
ಪೊನ್ನಂಪೇಟೆ ಮೂಲದ ವಿವಾಹಿತ ಮಹಿಳೆಯೊಬ್ಬರು ಮಾನಸಿಕ ಖಿನ್ನತೆಗೊಳಗಾಗಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಸಮಯ ಪ್ರಜ್ಞೆಯಿಂದ ಮಹಿಳೆಯನ್ನು ತಮ್ಮ ಜೀವದ ಹಂಗು ತೊರೆದು ಬೇತ್ರಿಯ ನಿವಾಸಿಗಳಾದ ಯೂನಸ್, ಶರೀಫ್, ರಷೀದ್, ಜಮೀರ್, ಕಬೀರ್, ಆಶ್ರಫ್ ಹಾಗೂ ಇತರರು ರಕ್ಷಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಪುತ್ರಿ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ವೀರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ವಾಣಶ್ರೀ ಸಂಬAಧಿಕರ ಮಾಹಿತಿ ಕಲೆ ಹಾಕಿ ಮಹಿಳೆಯೊಂದಿಗೆ ಸಮಾಲೋಚನೆ ನಡೆಸಿ ಸಾಂತ್ವಾನ ಹೇಳಿ ಅವರ ಕುಟುಂಬದ ಸದಸ್ಯರ ಜೊತೆಯಲ್ಲಿ ಕಳುಹಿಸಿಕೊಟ್ಟರು.