ನಾಪೋಕ್ಲು, ಸೆ. ೨೧: : ಇಲ್ಲಿಗೆ ಸಮೀಪದ ಪಾಲೂರು ಗ್ರಾಮದ ನಿವಾಸಿ ಲೋಕೇಶ್ ಎಂಬವರ ಪತ್ನಿ ಬಬಿತ (ಮಂಜುಳಾ) ೩೬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮನೆಯಲ್ಲಿ ಅತ್ತೆ, ಪತಿ ಲೋಕೇಶ್ ಹಾಗೂ ಎರಡು ಗಂಡು ಮಕ್ಕಳೊಂದಿಗೆ ವಾಸವಾಗಿದ್ದು ಶನಿವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತಿ ಲೋಕೇಶ್ ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೃತ ಬಬಿತಾಗೆ ಅನಾರೋಗ್ಯದ ಸಮಸ್ಯೆ ಇತ್ತು ಎನ್ನಲಾಗಿದ್ದು. ನಾಪೋಕ್ಲು ಪೊಲೀಸರು ಕೇಸು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.