ಮಡಿಕೇರಿ, ಸೆ. ೨೧: ಸಂಪಾಜೆಯ ಹಾಸ್ಟೆಲ್ನಲ್ಲಿ ಉಳಿದು ಅಲ್ಲಿಂದ ಶಾಲೆಗೆ ಹೋಗುತ್ತಿದ್ದ ದಕ್ಷಿಣ ಕನ್ನಡ ಸಂಪಾಜೆಯ ಆಲಡ್ಕದ ೧೨ ವರ್ಷ ಪ್ರಾಯದ ಬಾಲಕನೋರ್ವನ ಮರ್ಮಾಂಗವನ್ನು ಸಹಪಾಠಿ ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗಕ್ಕೆ ಪೆಟ್ಟಾಗಿದ್ದು, ಬಾಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅಪ್ಪ-ಅಮ್ಮನನ್ನು ಕಳೆದುಕೊಂಡಿರುವ ಬಾಲಕ ಕಲ್ಲುಗುಂಡಿಯ ತನ್ನ ದೊಡ್ಡಮ್ಮನ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ.
ಕಳೆದ ಹಲವು ದಿನಗಳಿಂದ ಸಂಪಾಜೆಯ ಹಾಸ್ಟೆಲ್ನಲ್ಲಿದ್ದು, ಅಲ್ಲಿಂದ ಶಾಲೆಗೆ ತೆರಳುತ್ತಿದ್ದ. ಇತ್ತೀಚೆಗೆ ರಾತ್ರಿ ಹಾಸ್ಟೆಲ್ನಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ತದನಂತರ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನೆಗೆ ಬಂದಿದ್ದಾನೆ. ಯಾರಲ್ಲಿಯೂ ಈ ವಿಷಯ ತಿಳಿಸದ ಬಾಲಕನ ಮರ್ಮಾಂಗ ಊದಿಕೊಂಡು ನೋವು ಅಧಿಕವಾದ ಕಾರಣ ತನ್ನ ದೊಡ್ಡಮ್ಮನಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಮನೆಯವರು, ಸಂಬAಧಿಕರು ಸೇರಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಬಾಲಕನಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೀಗ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಂಪಾಜೆ ಪೊಲೀಸ್ ಹೊರಠಾಣೆ ಹಾಗೂ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.