ಮಡಿಕೇರಿ, ಸೆ. ೨೧: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್‌ಗಳಲ್ಲಿ ಕೃಷಿಕರಿಗೆ ಸರ್ಕಾರದ ನಿರ್ದೇಶನದಂತೆ ಶೂನ್ಯ ಬಡ್ಡಿ ದರದಲ್ಲಿ ೩ ರಿಂದ ೫ ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ “ಉನ್ನತಿ ಭವನ”ದ ದಿ. ಪಂದ್ಯAಡ ಐ. ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ೯೯ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ೫ ಲಕ್ಷ ರೂ.ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಕೃಷಿ ಅಲ್ವಾವಧಿ ಸಾಲವನ್ನು

(ಮೊದಲ ಪುಟದಿಂದ) ರೂ.೫ ಲಕ್ಷಕ್ಕೆ ಏರಿಸಿದೆ. ಹಾಗೆಯೇ ಮಧ್ಯಮಾವಧಿ ಸಾಲ ಬಡ್ಡಿ ರಿಯಾಯಿತಿ ಯೋಜನೆಯಡಿ ಗರಿಷ್ಠ ಮಿತಿ ರೂ.೧೫ ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೊಡಗು ಜಿಲ್ಲೆಯ ಖಾಯಂ ನಿವಾಸಿಗಳ ಮಕ್ಕಳು ದೇಶ ಮತ್ತು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಬ್ಯಾಂಕಿನಲ್ಲಿ “ವಿದ್ಯಾ ಸಹಕಾರ”ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಗರಿಷ್ಠ ರೂ.೬೦ ಲಕ್ಷಗಳವರೆಗೆ ನೀಡಲಾಗುತ್ತಿದೆ.

ಸಹಕಾರ ಬ್ಯಾಂಕ್‌ಗಳು ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪ್ರಥಮ ಆದ್ಯತೆಯಲ್ಲಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಲೆಕ್ಕ ಪರಿಶೋಧನೆಯನ್ನು ವಿಳಂಬ ಮಾಡಬಾರದು ಎಂದು ಕೊಡಂದೇರ ಪಿ.ಗಣಪತಿ ಅವರು ಒತ್ತಿ ಹೇಳಿದರು. ಜಿಲ್ಲೆಯಲ್ಲಿ ೭೩ ವಿವಿಧ ರೀತಿಯ ಸಹಕಾರ ಸಂಘಗಳು ಇದ್ದು, ಆಯಾಯ ಆರ್ಥಿಕ ವರ್ಷದಲ್ಲಿ ಲೆಕ್ಕಪರಿಶೋಧನೆ ಮಾಡಿಸಿಕೊಳ್ಳಬೇಕು. ಈ ಸಂಬAಧ ವರದಿಯನ್ನು ಪ್ರತೀ ವರ್ಷ ಡಿಸಿಸಿ ಬ್ಯಾಂಕ್‌ಗೆ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ಪ್ರತೀ ವರ್ಷ ಪ್ರಗತಿ ಪಥದತ್ತ ಸಾಗುತ್ತಿದ್ದು, ಬ್ಯಾಂಕಿನ ಏಳಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಿದ್ದಾರೆ.

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿಗೆ ಇದೇ ಸಂದರ್ಭದಲ್ಲಿ ಅತೃಪ್ತಿ ವ್ಯಕ್ತಪಡಿಸಿದ ಬಾಂಡ್ ಗಣಪತಿ ಅವರು ಆಡಳಿತ ಮಂಡಳಿಗೆ ನಾಮ ನಿರ್ದೇಶನ ಸದಸ್ಯರನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಪರಿಗಣಿಸುವುದು ಸರಿಯಲ್ಲ. ಈ ಬಗ್ಗೆ ಚಿಂತಿಸಬೇಕಿದೆ ಎಂದರು.

೨೦೨೩-೨೪ನೇ ಸಾಲಿನ ಲೆಕ್ಕ ಪರಿಶೋಧನೆ(ಆಡಿಟ್)ನಲ್ಲಿ ಇದೇ ಮೊದಲ ಬಾರಿಗೆ ಶೇ.೯೩ ರಷ್ಟು ಅಂಕ ಪಡೆದು. ಬ್ಯಾಂಕು ಕಳೆದ ಹಲವು ವರ್ಷಗಳಿಂದ ಆಡಿಟ್‌ನಲ್ಲಿ “ಎ” ವರ್ಗೀಕರಣ ಇರುತ್ತದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿAದ, ೨೦೨೨-೨೩ ನೇ ಸಾಲಿಗೆ ಅತ್ಯುತ್ತಮ ಕಾರ್ಯ ನಿರ್ವಹಣೆಗೆ ನಮ್ಮ ಬ್ಯಾಂಕಿಗೆ ೨೦೨೪ ರ ಸೆಪ್ಟೆಂಬರ್, ೧೩ ರಂದು ನಡೆದ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ “ಅತ್ಯುತ್ತಮ ಸಾಧನಾ ತೃತೀಯ ಪ್ರಶಸ್ತಿ ದೊರೆತಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ವಿವಿಧ ಸಹಕಾರ ಬ್ಯಾಂಕುಗಳ ಅಧ್ಯಕ್ಷರಾದ ನಂದ ಸುಬ್ಬಯ್ಯ, ಎಂ.ಬಿ.ದೇವಯ್ಯ, ರವಿಬಸಪ್ಪ, ನಾಗೇಶ್ ಕುಂದಲ್ಪಾಡಿ, ಕೃಷ್ಣ ಗಣಪತಿ ಇತರರು ಸಹಕಾರ ಸಂಘಗಳ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಬAಧಿಸಿದAತೆ ಹಲವು ವಿಷಯ ಪ್ರಸ್ತಾಪಿಸಿದರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಹೊಟ್ಟೆಂಗಡ ಎಂ.ರಮೇಶ್, ಹೊಸೂರು ಜೆ.ಸತೀಶ್ ಕುಮಾರ್, ಕೆ.ಅರುಣ್ ಭೀಮಯ್ಯ, ಕಾಂಗೀರ ಎನ್.ಸತೀಶ್, ಪೂಳಂಡ ಪಿ.ಪೆಮ್ಮಯ್ಯ, ಎಚ್.ಕೆ.ಮಾದಪ್ಪ, ಎಸ್.ಸಿ. ಶರತ್‌ಶೇಖರ್, ಎನ್.ಎಂ. ಉತ್ತಪ್ಪ, ಶರವಣ ಕುಮಾರ್ ಟಿ.ಆರ್., ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಜಲಜಾ ಶೇಖರ್, ಎಂ.ಕೆ.ಬೆಳ್ಳಿಯಪ್ಪ, ವೃತ್ತಿಪರ ನಿರ್ದೇಶಕರಾದ ಎ.ಗೋಪಾಲಕೃಷ್ಣ, ಮುಂಡAಡ ಸಿ.ನಾಣಯ್ಯ ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್, ಬ್ಯಾಂಕಿನ ಸಿಇಒ ಪ್ರವೀಣ್ ಬಿ ನಾಯಕ್, ಪ್ರಧಾನ ವ್ಯವಸ್ಥಾಪಕಿ ಬೋಜಮ್ಮ ಜಿ.ಎಂ, ಇತರರು ಇದ್ದರು.