ಸೋಮವಾರಪೇಟೆ, ಸೆ. ೨೨: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಂಕುರA ಹಿರಿಯ ವಿದಾರ್ಥಿ ಗಳ ಎಜುಕೇಷನ್ ಟ್ರಸ್ಟ್ ವತಿಯಿಂದ ಪ್ರಾರಂಭಿಸಲು ಉದ್ದೇ ಶಿಸಿರುವ ನೂತನ ಎಲ್‌ಕೆಜಿ ತರಗತಿ ಕೊಠಡಿ ಉದ್ಘಾಟನಾ ಕಾರ್ಯಕ್ರಮ ತಾ. ೨೩ರಂದು (ಇಂದು) ನಡೆಯಲಿದೆ.

ಮಧ್ಯಾಹ್ನ ೨ಕ್ಕೆ ಶಾಸಕ ಡಾ. ಮಂತರ್‌ಗೌಡ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಂಕುರA ಟ್ರಸ್ಟ್ ಅಧ್ಯಕ್ಷ ವೈ.ಪಿ. ಬೋಜೇಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಕೆ. ವಿನೋದ್‌ಕುಮಾರ್, ಉದ್ಯಮಿಗಳಾದ ವಿ.ಎಂ. ವಿಜಯ, ಎಸ್.ಎಂ. ಡಿಸಿಲ್ವ, ಗಿರೀಶ್ ಮಲ್ಲಪ್ಪ, ಅರುಣ್ ಕೊತ್ನಳ್ಳಿ, ಕೊಡಗು ಜಿಲ್ಲಾ ಉಪನಿರ್ದೇಶಕ ರಂಗದಾಮಪ್ಪ, ಬಿಇಓ ಭಾಗ್ಯಮ್ಮ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಎ.ಡಿ. ಪಾರ್ವತಿ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಚ್.ಬಿ. ದಿಲೀಪ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ರೂಪಾ ಸತೀಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯದರ್ಶಿ ವಿನಯ್ ಸಂಭ್ರಮ್ ತಿಳಿಸಿದ್ದಾರೆ.