ಮಡಿಕೇರಿ, ಸೆ.೨೩ : ಸಮಾಜ ಕಲ್ಯಾಣ ಇಲಾಖಾ ವತಿಯಿಂದ ೨೦೨೪-೨೫ ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹ ಕಾನೂನು ಪದವೀಧರರು ತಾ. ೩೦ ರವರೆಗೆ ಇಲಾಖಾ ವೆಬ್ಸೈಟ್: ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ೪೦ ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ೦೩ ಅಥವಾ ೦೫ ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ ೨೦ ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು.
ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರುಹಾಜರಾಗಿದ್ದಲ್ಲಿ ಶಿಷ್ಯ ವೇತನವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯಥಿಗಳಿಗೆ ೧೩೫ ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (೨ ವರ್ಷಗಳ ತರಬೇತಿಗೆ ೧ ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್: ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ತಾ. ೩೦ ರವರೆಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬAಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕಾದ ಕಚೇರಿಗಳ ವಿವರ. ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ- ೯೪೮೦೮೪೩೦೩೭, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-೯೪೮೦೮೪೩೧೫೫, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-೯೪೮೦೮೪೩೧೫೬ ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-೯೪೮೦೮೪೩೧೫೭ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.