ಸೋಮವಾರಪೇಟೆ, ಸೆ. ೨೨: ಮಸೀದಿ, ದೇವಸ್ಥಾನ ಅಥವಾ ಚರ್ಚ್ಗಳಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ. ಯಾವುದೇ ಆರಾಧನಾಲಯಗಳು ಮನುಷ್ಯರ ನಡುವೆ ಉತ್ತಮ ಸಂಬAಧವನ್ನು ಬೆಸೆಯುವ ಕೆಲಸ ಮಾಡಿದರೆ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

ಇಲ್ಲಿನ ಜಲಾಲಿಯ ಮಸೀದಿ ವತಿಯಿಂದ ಮಸೀದಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸೌಹಾರ್ದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಧರ್ಮದಲ್ಲಾದರೂ ಧಾರ್ಮಿಕ ಕೇಂದ್ರಗಳು ಮನುಷ್ಯನ ಸಂಬAಧಗಳನ್ನು ಬೆಸೆಯುವ ಉತ್ತಮ ಕೆಲಸವನ್ನು ಮಾಡಬೇಕು. ಈ ನಿಟ್ಟಿನಲ್ಲಿ ಧರ್ಮಗುರುಗಳ ಪಾತ್ರ ಮಹತ್ವದ್ದು ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಧರ್ಮಗುರು ಮೌಲಾನ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಮಾತನಾಡಿ, ಪ್ರವಾದಿ ಮಹಮ್ಮದ್‌ರ ಕಾಲದಲ್ಲಿಯೂ ಮಸೀದಿ ಜ್ಞಾನದ ಕೇಂದ್ರವಾಗಿತ್ತು. ಇಂದಿಗೂ ಅವರ ಸಂದೇಶಗಳು ಸಾರ್ವಕಾಲಿಕವಾದುದು. ಮಕ್ಕಳಿಗೆ ಮಹಾನ್ ಸಂತರ ಸಂದೇಶಗಳನ್ನು ತಿಳಿಹೇಳುವ ಕೆಲಸ ಆಗಬೇಕಾಗಿದೆ ಎಂದರು.

ಮತ್ತೋರ್ವ ಅತಿಥಿ, ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಭಗವಂತನ ಜೊತೆ ಅನುಸಂಧಾನ ಮಾಡುವುದೇ ಎಲ್ಲಾ ಧರ್ಮಗಳ ಸಾರವಾಗಿದೆ. ಸಾಮರಸ್ಯದ ಬದುಕಿಗೆ ಧಾರ್ಮಿಕ ತಳಹದಿ ಅಗತ್ಯವಾಗಿದೆ ಎಂದು ಅಭಿಪ್ರಾಯಿಸಿದರು.

ಸೇಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಗುರು ಪ್ರಾಸ್ಸಿಸ್ ಚೆರಕ್ಕಲ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಎಲ್ಲಾ ಹಬ್ಬದ ಆಚರಣೆಗಳು ಎಲ್ಲಾ ಧರ್ಮದವರನ್ನು ಸೇರಿಸಿ ಆಚರಿಸುತ್ತಾರೆ. ಜಿಲ್ಲೆಯ ಜನರ ನೈಜ ಭಾವನೆಗಳನ್ನು ಅರಿತುಕೊಂಡು ಪ್ರೀತಿ ವಿಶ್ವಾಸದಿಂದ ಬದುಕಲು ಇಂತಹ ಆಚರಣೆಗಳು ಅವಶ್ಯಕವಾಗಿವೆ ಎಂದರು.

ಇದೇ ಸಂದರ್ಭ ಸೋಮವಾರಪೇಟೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎ.ಆದಂ ಅವರನ್ನು ಮಸೀದಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಲಾಲಿಯ ಮಸೀದಿ ಅಧ್ಯಕ್ಷ ಎಂ.ಬಿ.ಇಬ್ರಾಹಿA ವಹಿಸಿದ್ದರು. ವೇದಿಕೆಯಲ್ಲಿ ಸಮಿತಿ ಪದಾಧಿಕಾರಿಗಳಾದ ಅಬ್ದುಲ್ ಸಮದ್, ಕರೀಂ, ಆಲಿ ಸಖಾಫಿ, ಅಬ್ದುಲ್ ರೆಹಮಾನ್ ಮುಸ್ಲಿಯಾರ್, ಬಜೆಗುಂಡಿ ಖಿಳಾರಿಯ ಮಸೀದಿ ಅಧ್ಯಕ್ಷ ಕೆ.ಎ.ಯಾಕೂಬ್, ಕಾಗಡಿಕಟ್ಟೆ ಮಸೀದಿ ಅಧ್ಯಕ್ಷ ಮಹಮ್ಮದ್, ಉಸ್ತಾದ್ ಮುನೀರ್ ಸಅದಿ ಮತ್ತಿತರರು ಇದ್ದರು.