ಕುಶಾಲನಗರ, ಸೆ. ೨೨: ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರಕಾರ್ಮಿಕ ದಿನಾಚರಣೆ ತಾ. ೨೩ ರಂದು (ಇಂದು) ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕ ಸಂಘದ ವತಿಯಿಂದ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಾವಳಿ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು.
ಪೌರಕಾರ್ಮಿಕರ ಸಂಘದ ಗೌರವ ಸಲಹೆಗಾರರಾದ ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಆರ್. ಗಣೇಶ್, ಉಪಾಧ್ಯಕ್ಷೆ ರಶ್ಮಿ ಕಾರ್ಯದರ್ಶಿ ನಂಜುAಡ ಜಂಟಿ ಕಾರ್ಯದರ್ಶಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.