ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ಲೈಸೆನ್ಸ್ ರದ್ದು ಮಾಡಿ : ಸಿ.ಎಂ. ಸೂಚನೆ
ಬೆಂಗಳೂರು, ಸೆ. ೨೩ : ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬಳಿ ನೂತನ ಆಂಬ್ಯುಲೆನ್ಸ್ಗಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಡಿದರು. ಮೊಬೈಲ್ನಲ್ಲಿ ಮಾತನಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು. ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಡಾ ಹಗರಣ : ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ
ಬೆಂಗಳೂರು, ಸೆ. ೨೩: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು ತಾ.೨೪ರಂದು (ಇಂದು) ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ನ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಧ್ಯಾಹ್ನ ೧೨ ಗಂಟೆಗೆ ತೀರ್ಪು ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿದೆ. ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ಸಿದ್ದರಾಮಯ್ಯ ಪರ ವಾದ ಮಂಡಿಸಿದ್ದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ಸೆಪ್ಟೆಂಬರ್ ೧೨ರಂದು ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.
ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿ ಎಂಟು ಮಂದಿ ಸಾವು
ರಾಜನಂದಗಾAವ್, ಸೆ. ೨೩: ಛತ್ತೀಸ್ಗಢದ ರಾಜನಂದಗಾAವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ ಸಿಡಿಲು ಬಡಿದು ಕೆಲವು ಶಾಲಾ ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮ್ನಿ ಪೊಲೀಸ್ ಠಾಣಾ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಇಂದು ಮಧ್ಯಾಹ್ನ ೧. ೩೦ ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಸಿಡಿಲು ಬಡಿದು ಕೆಲವು ಶಾಲಾ ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೆ, ಒಬ್ಬರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜನಂದಗಾAವ್ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗಾರ್ಗ್ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಸಿಡಿಲು ಬಡಿದು ಏಳು ಮಂದಿ ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಮೂವರಿಗೆ ಜಾಮೀನು
ಬೆಂಗಳೂರು, ಸೆ. ೨೩: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ೧ ಆರೋಪಿ ಪವಿತ್ರಾ ಗೌಡ ಮತ್ತು ಎ೨ ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ತಾ.೨೫ ಮತ್ತು ತಾ.೨೭ಕ್ಕೆ ಮುಂದೂಡಿಕೆಯಾಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ ೫೭ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಇಂದು ಆದೇಶ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದ್ದು, ಮೂವರಿಗೆ ಇಂದು ಜಾಮೀನು ಸಿಕ್ಕಿದೆ. ಎ೧೫ ಆರೋಪಿ ನಿಖಿಲ್ ನಾಯ್ಕ್, ಎ೧೬ ಆರೋಪಿಯಾಗಿದ್ದ ಕೇಶವಮೂರ್ತಿ ಹಾಗೂ ಎ೧೭ ಆರೋಪಿ ಕಾರ್ತಿಕ್ಗೆ ಹೈಕೋರ್ಟ್ನಿಂದ ಜಾಮೀನು ದೊರೆತಿದೆ. ರೇಣುಕಾಸ್ವಾಮಿ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಂದ ಹಣದ ಆಮಿಷಕ್ಕೆ ಒಳಗಾಗಿ ಶವ ಸಾಗಿಸುವಾಗ, ಪೊಲೀಸರಿಗೆ ಶರಣಾಗುವಲ್ಲಿ ಮಾತ್ರ ಇವರ ಪಾತ್ರವಿತ್ತು, ಹತ್ಯೆಗೂ ಇವರಿಗೂ ಯಾವುದೇ ಸಂಬAಧವಿಲ್ಲ ಎಂದು ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ನಲ್ಲಿ ಹೇಳಲಾಗಿತ್ತು.
ಸೇತುವೆಯಿಂದ ಕೆಳಗೆ ಬಿದ್ದ ಬಸ್, ನಾಲ್ವರು ಸಾವು
ಅಮರಾವತಿ, ಸೆ. ೨೩: ಖಾಸಗಿ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ೩೦ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸೆಮಡೋಹ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಪರತವಾಡಿ ಧಾನಿ ಮಾರ್ಗದ ಬಸ್ ಮೇಲ್ಘಾಟ್ನ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆ ಕೆಳಗೆ ಬಿದ್ದಿದೆ. ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ೩೦ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸೌರಭ್ ಕಟಿಯಾರ್ ಮಾಹಿತಿ ನೀಡಿದ್ದಾರೆ. ತೀವ್ರವಾಗಿ ಗಾಯಗೊಂಡ ಮೂವರನ್ನು ಸೆಮಡೋಹ್ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದೆಹಲಿ: ಮುಖ್ಯಮಂತ್ರಿಯಾಗಿ ಆತಿಶಿ ಅಧಿಕಾರ ಸ್ವೀಕಾರ
ನವದೆಹಲಿ, ಸೆ. ೨೩: ಮೊನ್ನೆ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಇಂದು ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದÀರು. ದೆಹಲಿ ವಿಧಾನಸಭೆಯ ಅಧಿವೇಶನ ತಾ.೨೬೨೬ ಮತ್ತು ೨೭ ರಂದು ನಡೆಯಲಿದೆ. ಅತಿಶಿ ಅವರು ಸರ್ಕಾರದಲ್ಲಿ ಶಿಕ್ಷಣ, ಆದಾಯ, ಹಣಕಾಸು, ವಿದ್ಯುತ್ ಮತ್ತು ಲೋಕೋಪಯೋಗಿ ಇಲಾಖೆ ಸೇರಿದಂತೆ ೧೩ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಕುಳಿತುಕೊಂಡಿದ್ದ ಕುರ್ಚಿಯಲ್ಲಿ ಕೂರದೆ ಆತಿಶಿ ಅವರು ಪಕ್ಕದಲ್ಲಿ ಕುರ್ಚಿ ಹಾಕಿ ಕುಳಿತರು. ಕೇಜ್ರಿವಾಲ್ ಅವರು ಕುಳಿತುಕೊಂಡಿದ್ದ ಕುರ್ಚಿ ಹಾಗೆಯೇ ಖಾಲಿ ಇದೆ.