ಕುಶಾಲನಗರ, ಸೆ. ೨೪: ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಗಾದಿಯ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಗೊಂದಲಮಯವಾಗಿದ್ದು ತಕ್ಷಣ ಸಂಬAಧಿಸಿದ ಅಧಿಕಾರಿಗಳು ನಿಯಮಾಸುಸಾರ ಕ್ರಮ ಕೈಗೊಳ್ಳಬೇಕು ಎಂದು ಕುಶಾಲನಗರ ಬಿಜೆಪಿ ಪ್ರಮುಖರು ಮತ್ತು ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪಟ್ಟಣ ಪಂಚಾಯಿತಿ ಸದಸ್ಯರಾದ ಅಮೃತ ರಾಜ್, ಪ್ರಸಕ್ತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ಸಂಪೂರ್ಣ ನಿಯಮಬಾಹಿರವಾಗಿದೆ. ಇಬ್ಬರು ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಸಂಬAಧಿಸಿದ ಚುನಾವಣಾ ಅಧಿಕಾರಿಗಳು ಯಾವುದೇ ರೀತಿಯ ಸ್ಪಷ್ಟನೆ ನೀಡುತ್ತಿಲ್ಲ ಎಂದು ಹೇಳಿದರು. ಗೊಂದಲದ ನಡುವೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯುವುದು ಸರಿಯಲ್ಲ ಎಂದು ಹೇಳಿದರು.
ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷರಾದ ಎಂ ಚರಣ್ ಮಾತನಾಡಿ, ತಾಲೂಕು ತಹಶೀಲ್ದಾರ್ ಹಾಗೂ ಚುನಾವಣೆ ಅಧಿಕಾರಿಗಳು ತಾವುಗಳು ನೀಡುವ ಮನವಿಗೆ ಮನ್ನಣೆ ನೀಡುತ್ತಿಲ್ಲ. ನಿಯಮ ಬಾಹಿರವಾಗಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಪುರಸಭೆಗೆ ಆಯ್ಕೆ ಮಾಡಿದ ನಾಮ ನಿರ್ದೇಶಕ ಸದಸ್ಯರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಮತದಾನ ಹಕ್ಕು ನೀಡಿರುವುದು ಸರಿಯಲ್ಲ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ತಾಲೂಕು ಅಧ್ಯಕ್ಷÀ ಗೌತಮ್ ಗೌಡ ಅಧಿಕಾರಿಗಳು ಸರ್ಕಾರದ ಕೈಗೊಂಬೆಯAತೆ ವರ್ತಿಸುತ್ತಿದ್ದಾರೆ ಎಂದರು. ಈ ಬಗ್ಗೆ ನಡೆಯುತ್ತಿರುವ ನಿಯಮ ಬಾಹಿರ ಕ್ರಮಗಳ ಬಗ್ಗೆ ನ್ಯಾಯಾಂಗ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಸಂದರ್ಭ ಗೋಷ್ಠಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಜಯವರ್ಧನ್, ಪ್ರಮುಖರಾದ ಕೆ ಜಿ ಮನು, ಉಮಾಶಂಕರ್, ಮಧುಸೂದನ್, ಎಂ ಡಿ ಕೃಷ್ಣಪ್ಪ ಇದ್ದರು.