ನಾಪೋಕ್ಲು, ಸೆ. ೨೪: ಕಟ್ಟೆಮಾಡು ಗ್ರಾಮದ ಗ್ರೀನ್ಸ್ ಯುವಕ ಸಂಘದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಮುಕ್ತ ಹಗ್ಗಜಗ್ಗಾಟ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಮತ್ತು ಆಟೋಟಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅಕ್ಟೋಬರ್ ೨ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೫ ರವರೆಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಮತ್ತು ಆಟೋಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುರುಷರಿಗೆ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ೧೦೦೦೦ ರೂ.ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ ೬ ಸಾವಿರ ರೂ. ಮತ್ತು ಟ್ರೋಫಿ ವಿತರಿಸಲಾಗುವುದು ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ೬೦೦೦ ರೂ. ಮತ್ತು ಟ್ರೋಫಿ,ದ್ವಿತೀಯ ಬಹುಮಾನ ೪೦೦೦ ರೂ.ನಗದು ಮತ್ತು ಟ್ರೋಫಿ ವಿತರಿಸಲಾಗುವುದು.
ಸಾರ್ವಜನಿಕರಿಗೆ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ೭೦೦೦ ರೂ. ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ ರೂ ೫೦೦೦ ರೂ. ನಗದು ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ ೩೦೦೦ ರೂ. ನಗದು ಮತ್ತು ಟ್ರೋಫಿ ಅನ್ನು ವಿತರಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ. ಹಗ್ಗಜಗ್ಗಾಟ ಸ್ಪರ್ಧೆಗೆ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗೆ ಅದೇ ದಿನ ಬೆಳಿಗ್ಗೆ ೧೧ ಗಂಟೆಯೊಳಗೆ ಹೆಸರು ನೋಂದಾಯಿಸಬಹುದಾಗಿದೆ.