ಕುಶಾಲನಗರ, ಸೆ. ೨೪: ನದಿ ಮೂಲ ಜಲ ಮೂಲಗಳ ಸಂರಕ್ಷಣೆ ಮಾಡುವುದು ನೀರಿನ ಬಳಕೆ ಮಾಡುವವರ ಆದ್ಯ ಕರ್ತವ್ಯವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ ಜಮೀರ್ ಅಹ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ ೧೬೩ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೀರಿನ ಮೌಲ್ಯದ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಆ ಮೂಲಕ ಜಲ ಮೂಲಗಳ ಸಂರಕ್ಷಣೆ ಅಗತ್ಯವಾಗಿದೆ ಎಂದರು. ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೆ ಎಸ್ ಕೃಷ್ಣೇಗೌಡ ಅವರು ಮಾತನಾಡಿ, ನದಿ ತೊರೆಗಳ ಸ್ವಚ್ಛತಾ ಕಾಯಕ ಪ್ರತಿ ಪಂಚಾಯತ್ ಮಟ್ಟದಲ್ಲಿ ನಡೆಯಬೇಕಾಗಿದೆ. ಈ ಸಂಬAಧ ಶಾಸಕರು ಸರ್ಕಾರದ ಮೂಲಕ ಗಮನ ಸೆಳೆಯಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರು ಹಾಗೂ ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಸಂಚಾಲಕರು ಆಗಿರುವ ಎಂ.ಎನ್. ಚಂದ್ರಮೋಹನ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ಒದಗಿಸಿದರು..

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಟಿ.ಆರ್. ಪ್ರಭುದೇವ್ ಅವರು ಮಾತನಾಡಿ, ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಈ ಸಾಲಿನಲ್ಲಿ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ನದಿ ಸಂರಕ್ಷಣೆ ಬಗ್ಗೆ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ನಿರಂತರವಾಗಿ ತಾವುಗಳು ಕೈಜೋಡಿಸುವುದಾಗಿ ಭರವಸೆ ವ್ಯಕ್ತಪಡಿಸಿದರು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ ಕುಂಕುಮಾರ್ಚನೆ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಪ್ರಾಧ್ಯಾಪಕರಾದ ಡಾ. ಜಮೀರ್ ಅಹಮದ್ ಮತ್ತು ಕೆ.ಎಸ್. ಕೃಷ್ಣೇಗೌಡ ಅವರುಗಳನ್ನು ಆರತಿ ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಆರತಿ ಬಳಗದ ಸಂಚಾಲಕರಾದ ವನಿತಾ ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಮಂಡೇಪAಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಪದ್ಮಾ ಪುರುಷೋತ್ತಮ್, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ.ಜೆ. ಶಿವರಾಜ್, ಮಹಮ್ಮದ್ ಮುಸ್ತಾಫಾ, ಷಂಶುದ್ದೀನ್, ಹೆಚ್.ವಿ. ವಿನೋದ್, ಹೆಚ್.ಸಿ, ಜಯಪ್ರಕಾಶ್ ಇದ್ದರು.