ಮಡಿಕೇರಿ ಸೆ. ೨೪: ಮೂರ್ನಾಡು ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ಮಕ್ಕಳು ಭಾಗವಹಿಸಿ, ಓಟದ ಸ್ಪರ್ಧೆಯಲ್ಲಿ ದ್ವಿತಿಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ್ದಾರೆ. ಇದರೊಂದಿಗೆ ಖೋ ಖೋ, ಕಾಲುಚೆಂಡು, ಚೆಂಡು ಎಸೆತ, ಹಾಕಿ, ಬ್ಯಾಡ್‌ಮೆಂಟನ್, ಚೆಸ್ ಇವುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಗಳಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೂಡಿಗೆಯಲ್ಲಿ ನಡೆದ ಹಾಕಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.