ಪೊನ್ನಂಪೇಟೆ, ಸೆ. ೨೪: ಪೊನ್ನಂಪೇಟೆ ಹಳ್ಳಿಗಟ್ಟುವಿನ ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜು ಮತ್ತು ಕೊಡಗು ಪದವಿಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯನ್ನು ಪೊನ್ನಂಪೇಟೆಯಲ್ಲಿ ಆಯೋಜನೆ ಮಾಡಲಾಗಿತ್ತು. ಗುಡ್ಡಗಾಡು ಓಟದ ಸ್ಪರ್ಧೆಗೆ ಸಿ.ಐ.ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಚಾಲನೆ ನೀಡಿದರು.

ಸ್ಪರ್ಧೆಯಲ್ಲಿ ತಾಲೂಕಿನ ಹಲವಾರು ಕಾಲೇಜಿನ ಕ್ರೀಡಾಪಟುಗಳು ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಕಾಲೇಜಿನ ವಿದ್ಯಾರ್ಥಿಗಳಾದ ಜಿ.ವೈ. ಅವನಿ, ಟಿ.ಸಿ. ಶೃಂಗಾ, ಜಿ.ಡಿ. ದಶಮಿ, ಕಂಕ್ಷಿತ ಧನ್ಯ, ಶ್ರೀಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈ.ಎಂ ಕಾವ್ಯ, ಸಿ.ಐ.ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ಎಂ.ಬಿ. ಪೊನ್ನಮ್ಮ ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.

ಬಾಲಕರ ವಿಭಾಗದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂ.ಡಿ. ಪ್ರಶಾಂತ್, ಪೊನ್ನಂಪೇಟೆಯ ಸಿ.ಐ.ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಎಸ್.ಆರ್. ಕಾರ್ತಿಕ್, ಇಶಾನ್ ಬೋಪಣ್ಣ, ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಕಾಲೇಜಿನ ವಿದ್ಯಾರ್ಥಿಗಳಾದ ಬಿಜೇಂದರ್ ರಾವ್, ಡಿ. ಧನುಷ್ ಗೌಡ, ಬಾಳೆಲೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪಿ.ಸಿ. ಶ್ರವಣ್ ತಾಲೂಕು ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು. ಬಾಲಕಿಯರ ಮತ್ತು ಬಾಲಕರ ವಿಭಾಗದಿಂದ ಪ್ರತ್ಯೇಕವಾಗಿ ತಲಾ ೬ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.

ಗುಡ್ಡಗಾಡು ಓಟದ ಸ್ಪರ್ಧೆಯ ನೇತೃತ್ವವನ್ನು ಪೊನ್ನಂಪೇಟೆಯ ಸಿ.ಐ.ಪಿ.ಯು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್ ಕುಮಾರ್ ವಹಿಸಿಕೊಂಡಿದ್ದರು. ಈ ಸಂದರ್ಭ ಸಿ.ಐ.ಪಿ.ಯು. ಉಪನ್ಯಾಸಕ ವೃಂದದವರು ಹಾಜರಿದ್ದರು.