ಗೋಣಿಕೊಪ್ಪಲು, ಸೆ.೨೩ : ಮಕ್ಕಳಲ್ಲಿ ಅಡಗಿರುವ ಆಂತರಿಕ ಪ್ರತಿಭೆಯನ್ನು ಹೊರಸೂಸಲು ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಕೊಲ್ಲೀರ ಧರ್ಮಜ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕಚೇರಿ ವೀರಾಜಪೇಟೆ ಸಮೂಹ ಸಂಪನ್ಮೂಲ ಕೇಂದ್ರ ಪಾಲಿಬೆಟ್ಟ ಸಂಯುಕ್ತ ಆಶ್ರಯದಲ್ಲಿ ಕಳತ್ಮಾಡುವಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಇವರು, ಪ್ರತಿ ಮಕ್ಕಳಲ್ಲಿಯೂ ವಿಶೇಷ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳ ಹೊರ ಸೂಸುವಿಕೆಗೆ ಉತ್ತಮ ವೇದಿಕೆಗಳು ನಿರ್ಮಾಣವಾಗಬೇಕು. ಮಕ್ಕಳಲ್ಲಿ ಆಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಮಾಡಬೇಕು. ಶಾಲಾಭಿವೃದ್ಧಿ ಸಮಿತಿ, ಪೋಷಕರು ಹಾಗೂ ಶಿಕ್ಷಕರು ಸಮನ್ವಯತೆ ಕೆಲಸ ಮಾಡಿದರೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಶಾಲೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕಳತ್ಮಾಡುವಿನ ಗ್ರಾಮಸ್ಥರು ಹಿರಿಯರು, ಹಳೆಯ ವಿದ್ಯಾರ್ಥಿಗಳು ಶ್ರಮಿಸುತ್ತಿದ್ದಾರೆ. ಇಂತಹ ಕೆಲಸವು ನಿರಂತರವಾಗಿ ನಡೆಯುವಂತಾಗಬೇಕು. ವಿದ್ಯಾರ್ಥಿಗಳು ಕೂಡ ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಪ್ರಜೆಯಾಗಿ ಕೊಡುಗೆ ನೀಡುವಂತಾಗಬೇಕು ಎಂದರು.

ಪಾಲಿಬೆಟ್ಟ ಸಿಆರ್‌ಪಿ ಕೆ.ಸಿ.ಕರುಂಬಯ್ಯ ಮಾತನಾಡಿ, ಶಿಕ್ಷಣ ಇಲಾಖೆಯು ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿಯನ್ನು ಕ್ಲಸ್ಟರ್ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು ತಾಲೂಕು ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುತ್ತಿದೆ ಎಂದರು.

ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಎಂ.ಎಸ್.ಉಷಾ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಳತ್ಮಾಡುವಿನ ಹಿರಿಯ ನಿವೃತ್ತ ಮುಖ್ಯ ಶಿಕ್ಷಕÀ ಕೊಲ್ಲಿರ ಗೌರಮ್ಮ ಮುದ್ದಪ್ಪ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೊಸೂರು ಗ್ರಾಮ ಪಂಚಾಯಿತಿಯ ಸದಸ್ಯ ಕೊಲ್ಲೀರ ಧನು ಪೂಣಚ್ಚ ಮಾತನಾಡಿ, ಕಳತ್ಮಾಡು ಶಾಲೆಯ ಶಿಕ್ಷಕರು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ಸಭೆಯನ್ನು ಉದ್ದೇಶಿಸಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕೊಂಗAಡ ಜಪ್ಪು, ಹೊಸೂರು ಗ್ರಾಮ ಪಂಚಾಯಿತಿಯ ಪಿಡಿಒ ಮೇದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಮಾತನಾಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿ.ವಿ.ಪ್ರಕಾಶ್, ಟಿ.ಎಂ.ಸುಶೀಲ, ಕ್ರೀಡಾ ಸಮಿತಿಯ ಅಧ್ಯಕ್ಷÀ ಕತ್ರಿಕೊಲ್ಲಿ ಚಂದ್ರಶೇಖರ್, ಉಪಾಧ್ಯಕ್ಷ ಕೊಲ್ಲಿರ ವಿಜು ಬೋಪಣ್ಣ, ಕಾರ್ಯದರ್ಶಿ ಕೊಲ್ಲೀರ ನರು ಸುಬ್ರಮಣಿ, ಸದಸ್ಯರುಗಳಾದ ಕಂಬೀರAಡ ಬೋಪಣ್ಣ, ಗುಮ್ಮಟ್ಟಿರ ಆಕಾಶ್, ಎ.ಬಿ.ಪ್ರಕಾಶ್, ಕೆ.ಆರ್.ಅಣ್ಣಯ್ಯ, ಬಿ.ಎ.ಕಾವೇರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಲ್ಯಮಂಡ ವೇಣು ಮಂದಣ್ಣ, ಜಯಪ್ರಕಾಶ್, ಶಿಕ್ಷಕರ ಸಂಘದ ರಂಗಸ್ವಾಮಿ, ಗ್ರಾ.ಪಂ.ಸದಸ್ಯರಾದ ಕೊಲ್ಲಿರ ಗೋಪಿ ಚಿಣ್ಣಪ್ಪ, ಶಿಕ್ಷಣ ಇಲಾಖೆಯ ಇಸಿಒ ವಿಶಾಲಾಕ್ಷಿ, ಬಿಆರ್‌ಪಿ ರುಕ್ಮಿಣಿ, ಕೇಶವ ಮೂರ್ತಿ, ಸಿಆರ್‌ಪಿಗಳಾದ ಕರುಂಬಯ್ಯ, ರವಿ, ರಾಧ, ವಿದ್ಯಾ, ಮುಖ್ಯ ಶಿಕ್ಷಕರಾದ ಭಾಗ್ಯವತಿ ಉಪಸ್ಥಿತರಿದ್ದರು.

ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳು ವಿವಿಧ ವೈಯುಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸ ಪ್ರಶ್ನೆ, ರಂಗೋಲಿ, ಜಾನಪದಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.