*ಗೋಣಿಕೊಪ್ಪ, ಸೆ. ೨೪: ಕೊಡಗು ಜಿಲ್ಲೆಯಲ್ಲಿ ಭಾರತ್ ಜೈಭೀಮ್ ಸೇನೆ ಅಸ್ತಿತ್ವಕ್ಕೆ ತರಲಾಗಿದ್ದು, ದಲಿತ ಪರ ಹೋರಾಟದಲ್ಲಿ ತೊಡಗಿಕೊಳ್ಳಲಾಗುವುದು ಎಂದು ಭಾರತ್ ಜೈಭೀಮ್ ಸೇನೆ ರಾಜ್ಯಾಧ್ಯಕ್ಷ ದಿನೇಶ್ ಹೇಳಿದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾಧ್ಯಕ್ಷ ಶಶಿಕುಮಾರ್, ವೀರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಸಿದ್ದರಾಜು, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ. ಯೋಗೇಶ್, ಉಪಾಧ್ಯಕ್ಷರಾಗಿ ಮಂಜು ಅವರನ್ನು ಅವರುಗಳಿಗೆ ಆಯ್ಕೆ ಪತ್ರ ವಿತರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು ಹೋರಾಟ ಮುಂದುವರಿಸಲಾಗುವುದು. ಶಿಕ್ಷಣ ವಂಚಿತರಿಗೆ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಎಲ್. ಕೃಷ್ಣ, ರಾಜ್ಯ ಯುವ ಘಟಕ ಅಧ್ಯಕ್ಷ ಶಿಶಿಲ್, ಮಹಿಳಾ ಅಧ್ಯಕ್ಷೆ ವಿಜಯಲಕ್ಷಿö್ಮ, ಮಹಿಳಾ ಪ್ರಮುಖರಾದ ವಿಜಯಲಕ್ಷಿö್ಮ, ಉಸ್ತುವಾರಿ ಸವಿತಾ, ಯುವ ಘಟಕ ಉಪಾಧ್ಯಕ್ಷ ಮುಂಜುನಾಥ್, ಉಪಾಧ್ಯಕ್ಷ ದಿನೇಶ್, ಪ್ರಧಾನ ಕಾರ್ಯದರ್ಶಿ ಯೋಗೇಶ್ ಇದ್ದರು.